ಶಾಸಕ ಬಾಲಕೃಷ್ಣ ಸೋಲಿಸುವುದೇ ನನ್ನ ಗುರಿ: ಎ.ಮಂಜು
ಮಾಗಡಿ: ಈ ಬಾರಿ ಎಚ್.ಸಿ. ಬಾಲಕೃಷ್ಣ ಅವರನ್ನು ಸೋಲಿಸುವುದೇ ನನ್ನ ಗುರಿ ಎಂದು ಕೆಪಿಸಿಸಿ ಸದಸ್ಯ ಎ.ಮಂಜು ಶಾಸಕರಿಗೆ ಸವಾಲುಹಾಕಿದ್ದಾರೆ.
ಅವರು ಮಾಗಡಿ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಭ್ಯರ್ಥಿಯಾಗಲು ಆಕಾಂಕ್ಷಿಯಾಗಿ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿರುತ್ತೇನೆ. ನನಗೆ ಟಿಕೆಟ್ ತಪ್ಪಿಸಲು ಯಾರ್ಯಾರ ಬಳಿ ಶಾಸಕರು ಕಾಲು, ಕೈಹಿಡಿದು ಯತ್ನಿಸುತ್ತಿದ್ದಾರೆ ಎಂಬ ಅರಿವಿದೆ. ಯಾರಿಗೇ ಟಿಕೆಟ್ ನೀಡಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ದುಡಿಯುತ್ತೇನೆ. ಶಾಸಕ ಎಚ್.ಸಿ. ಬಾಲಕೃಷ್ಣ ಒಬ್ಬ ಗೋಮುಖ ವ್ಯಾಘ್ರ, ಕ್ಷೇತ್ರದಲ್ಲಿ ಶಾಸಕ ಬಾಲಕೃಷ್ಣ ಅವರ ಕುಮ್ಮಕ್ಕಿನ ಗುಂಡಾಗಿರಿಗೆ ಮತದಾರರೇ ಇತಿಶ್ರೀ ಹಾಡಲಿದ್ದಾರೆ ಎಂದರು.
ಈಗಾಗಲೇ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 600 ಕೋಟಿ ರು. ಹಗರಣ ಬಯಲು ಮಾಡಿದ್ದೇನೆ. ಈ ಸಂಬಂಧ ಲೋಕಾಯುಕ್ತಕ್ಕೂ ಪ್ರಕರಣ ದಾಖಲಿಸಲಾಗುವುದು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಲೆ: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಲೆಯಿದೆ ಎಂದು ಕಾಂಗ್ರೆಸ್ ನಾಯಕರ ಮನೆ ಕದ ತಟ್ಟುತ್ತಾ, ಹೊರಗಡೆ ಮಾತ್ರ ಕಾಂಗ್ರೆಸಿಗರು ಆಹ್ವಾನ ನೀಡುತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡುತ್ತಿರುವ ಬಾಲಕೃಷ್ಣ ಅವರು ಚಿಕ್ಕಮುದಿಗೆರೆ ಗ್ರಾ.ಪಂ.ಗೆ ಸಂಬಂಧಿಸಿದಂತೆ ಪೊಲೀಸರಿಂದ ಕಾಂಗ್ರೆಸಿಗರ ಮೇಲೆ ಕೇಸು ಹಾಕಿಸಲು ಸಚಿವ ಅಶೋಕ್ ಅಂಗಲಾಚಿದ್ದು ಗುಟ್ಟಾಗಿ ಉಳಿದಿಲ್ಲ. ನನ್ನ ವೈಯಕ್ತಿ ವಿಚಾರವನ್ನ ಹೇಳಿಕೊಂಡು 600 ಕೋಟಿ ಹಗರಣ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಅವರ ವೈಯಕ್ತಿ ವ್ಯವಹಾರ ನನಗೂ ಗೊತ್ತಿದೆ. ಹತಾಶ ರಾಜಕಾರಣಕ್ಕೆ ಈ ಬಾರಿ ಮತದಾರರೇ ಮುಕ್ತಿ ಕಾಣಿಸುತ್ತಾರೆ ಎಂದು ಎ.ಮಂಜು ಟೀಕಾ ಪ್ರಹಾರ ನಡೆಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಚಿಗಳೂರು ಗಂಗಾಧರ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎನ್. ಮಂಜುನಾಥ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಎಸ್. ಕುಮಾರ್, ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಚ್. ಕೃಷ್ಣಮೂರ್ತಿ, ರವೀಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

