ಸಾಂವಿಧಾನಿಕ ಮೌಲ್ಯ ರಕ್ಷಣೆ ನಮ್ಮ ಕರ್ತವ್ಯ
ದೊಡ್ಡಬಳ್ಳಾಪುರ: ದೇಶದ ಸುಭದ್ರತೆ ಮತ್ತು ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ಭಾರತೀಯನೂ ತನ್ನ ಹೊಣೆಯಾಧಾರಿತ ಜವಾಬ್ದಾರಿಯನ್ನು ನಿರ್ವಹಿಸಬೇಕು. ಭಾರತ ಇಂದು ಜಾಗತಿಕವಾಗಿ ಸದೃಢಶಕ್ತಿಯಾಗಿ ರೂಪಗೊಳ್ಳುತ್ತಿರುವುದು ಗಣನೀಯ ಬೆಳವಣಿಗೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಡಾ.ಮಹೇಶ್ ಅಭಿಪ್ರಾಯಪಟ್ಟರು.
ಇಲ್ಲಿನ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಬೆಂ.ಗ್ರಾ.ಜಿಲ್ಲಾ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ನಡೆದ ಭಾರತ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾರತದೊಂದಿಗೇ ಸ್ವಾತಂತ್ರ್ಯವನ್ನು ಗಳಿಸಿಕೊಂಡ ನೆರೆಯ ದೇಶ ಇನ್ನೂ ತನ್ನ ಸುಭದ್ರ ಆಡಳಿತ ವ್ಯವಸ್ಥೆ ರೂಪಿಸಿಕೊಳ್ಳಲು ಪರದಾಡುತ್ತಿದೆ. ಕ್ಷಿಪ್ರಕ್ರಾಂತಿ, ದಬ್ಬಾಳಿಕೆ, ಪ್ರಭುತ್ವ ವಿರೋಧಿ ಕೃತ್ಯಗಳು ಅಲ್ಲಿ ಸಾಮಾನ್ಯವೇ ಆಗಿದೆ. ಆದರೆ ಭಾರತ ಇಂದು ತನ್ನ ಆಡಳಿತ ವ್ಯವಸ್ಥೆಯನ್ನು ಜಗತ್ತಿಗೇ ಮಾದರಿಯಾಗಿ ಬಿಂಬಿಸುತ್ತಿದೆ. ಜಅಧ್ಯಕ್ಷತೆ ವಹಿಸಿದ್ದ ಶಾಸಕ ನರಸಿಂಹಸ್ವಾಮಿ ಜನಸಾಮಾನ್ಯನಿಗೆ ನೈಜ ಅರ್ಥದಲ್ಲಿ ಸಾಂವಿಧಾನಿಕ ಚಿಂತನೆಗಳು ಮತ್ತು ಆಶಯಗಳು ತಲುಪುತ್ತಿವೆ ಎಂದರು.
ಆಕರ್ಷಕ ಪೆರೇಡ್: ಧ್ವಜಾರೋಹಣದ ನಂತರ ಆಕರ್ಷಕ ಪಥ ಸಂಚಲನೆ ನಡೆಯಿತು. ಉಪವಿಭಾಗಾಧಿಕಾರಿ ಡಾ.ಮಹೇಶ್ ಪೆರೇಡ್ನಲ್ಲಿ ಭಾಗವಹಿಸಿದ್ದ ಸುಮಾರು 60ಕ್ಕೂ ಹೆಚ್ಚು ತಂಡಗಳ ವೀಕ್ಷಣೆ ನಡೆಸಿ ಗೌರವ ವಂದನೆ ಸ್ವೀಕರಿಸಿದರು. ನಂತರ ಧ್ವಜವಂದನಾ ಪೆರೇಡ್ ನಡೆಯಿತು.
ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಹನುಮಂತೇಗೌಡ, ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ನಾಗರಾಜ್, ನಗರಸಭೆ ಅಧ್ಯಕ್ಷ ಜಗದೀಶರೆಡ್ಡಿ, ತಹಸೀಲ್ದಾರ್ ಚಂದ್ರ, ಆಯುಕ್ತ ಚಿಕ್ಕಣ್ಣ, ಡಿವೈಎಸ್ಪಿ ಶ್ರೀಧರ್ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮ: ನಂತರ ದೊಡ್ಡಬಳ್ಳಾಪುರ ನಗರದ ಮಾರುಕಟ್ಟೆ ಶಾಲೆ ಸೇರಿದಂತೆ ಹಲವು ಶಾಲೆಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ರೂಪಕಗಳ ಪ್ರದರ್ಶನ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

