ರಾಮನಗರ: ಬಾಲಗಂಗಾಧರನಾಥ ಸ್ವಾಮಿಯವರ ಪುಣ್ಯಾರಾಧನೆ
ರಾಮನಗರ: ಶ್ರೀ ಬಾಲಗಂಗಾಧರನಾಥ ಸ್ವಾಮಿಯವರ ಪುಣ್ಯಾರಾಧನಾ ಕಾರ್ಯಕ್ರಮವು ನಗರದ ಹಳೇ ಬಸ್ ನಿಲ್ದಾಣದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿತು. ಸ್ವಾಮೀಜಿಯವರ ಭಕ್ತವೃಂದವು ಏರ್ಪಡಿಸಿದ್ದ ಪುಣ್ಯಾರಾಧನಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ಶ್ರೀಗಳಿಗೆ ನಮನ ಸಲ್ಲಿಸಿದರು. ಬೆಳಗ್ಗೆ 11ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಜಾನಪದ ಲೋಕದ ಬಳಿ ಇರುವ ಬಿಜಿಎಸ್ ಅಂಧರ ಶಾಲೆಯ ಮಕ್ಕಳು ಸ್ವಾಮೀಜಿ ಮತ್ತು ಆದಿ ಚುಂಚನಗಿರಿ ಕ್ಷೇತ್ರದ ಬಗೆಗಿನ ಭಕ್ತಿ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದವರಲ್ಲಿ ಭಕ್ತಿಯ ಸಿಂಚನ ಮಾಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

