ಬಾಲಗಂಗಾಧರನಾಥ ಸ್ವಾಮೀಜಿ ಕರ್ನಾಟಕ ಕಂಡ ಮಹಾಪುರುಷ
ರಾಮನಗರ: ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಕರ್ನಾಟಕ ಕಂಡ ಮಹಾಪುರುಷ. ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಡೆಯುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ನಾವೆಲ್ಲರೂ ಪಣತೊಡಬೇಕು ಎಂದು ಯುವ ಮುಖಂಡ ಗಂಗಾಧರಯ್ಯ ಅಭಿಪ್ರಾಯಪಟ್ಟರು.
ತಾಲೂಕಿನ ಸುಗ್ಗನಹಳ್ಳಿಯಲ್ಲಿ ನಡೆದ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಸ್ವಾಮೀಜಿಗಳು ರಾಜ್ಯದಲ್ಲಿ ವನಸಂವರ್ಧನ ಟ್ರಸ್ಟ್ ಮೂಲಕ 5 ಕೋಟಿ ಸಸಿಗಳನ್ನು ನೆಟ್ಟು, ಹಸಿರು ಕ್ರಾಂತಿ ಮಾಡಿದ್ದಾರೆ ಎಂದು ಪ್ರಶಂಸಿಸಿದರು.
ಚುಂಚನಗಿರಿಯನ್ನು ಚಿನ್ನದ ಗಿರಿಯನ್ನಾಗಿ ಮಾಡಿದ ಪವಾಡ ಪುರುಷ ಅವರಾಗಿದ್ದರು. ಅಂಧಮಕ್ಕಳು, ದೀನ ದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಸ್ವಾಮೀಜಿ ಮಾಡಿರುವ ಕಾರ್ಯಗಳು ಶ್ಲಾಘನೀಯ. ಇಂತಹ ಪವಾಡ ಪುರುಷ ನಮ್ಮ ತಾಲೂಕಿನವರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಶ್ರೀಗಳ ಸೇವೆಯನ್ನು ಸ್ಮರಿಸಿದರು.
ಬಿಜಿಎಸ್ ಅಂಧ ಶಾಲೆಯ ಮಕ್ಕಳಿಂದ ಭಕ್ತಿಗೀತೆಗಳ ಗಾಯನ ನಡೆಯಿತು. ಸುಗ್ಗನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಪಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಎಸ್.ಬೈರೇಗೌಡ, ರಾಮಕೃಷ್ಣಯ್ಯ, ಸಿ.ಲೋಕೇಶ್, ಬೈರಪ್ಪ, ರೇವಣಸಿದ್ದಪ್ಪ, ರೇಣುಕಯ್ಯ, ಬಾಲರಾಜು, ರಾಜೇಶ್, ಎಂ.ಎಸ್.ರವಿ. ವಿಜಯ್‌ಕುಮಾರ್, ಹರೀಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

