ಮಕ್ಕಳ ಹಕ್ಕು ಗ್ರಾಮಸಭೆ ಮೂಲಕ ಜಾಗೃತಿ ತರುವುದು ಅಗತ್ಯ: ವೆಂಕಟೇಶ್
ಸೂಲಿಬೆಲೆ: ಸರ್ಕಾರ ಜಾರಿಗೆ ತಂದಿರುವ ಮಕ್ಕಳ ಹಕ್ಕುಗಳನ್ನು ಗ್ರಾಮಸಭೆಗಳ ಮೂಲಕ ಜಾಗೃತಿಯನ್ನು ತರುವುದು ಅಗತ್ಯವಾಗಿದೆ ಎಂದು ಸ್ಫೂರ್ತಿ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಟಿ.ವೆಂಕಟೇಶ್ ಹೇಳಿದ್ದಾರೆ.
ನಂದಗುಡಿ ಬಳಿಯ ಇಟ್ಟಸಂದ್ರ ಹಾಗೂ ನಂದಗುಡಿ ಗ್ರಾಪಂದಲ್ಲಿ ಸ್ಫೂರ್ತಿ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಂಸ್ಥೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಪಾಲ್ಗೊಡು ಮಾತನಾಡಿದರು.
2007ರಿಂದ ಮಕ್ಕಳ ಹಕ್ಕುಗಳನ್ನು ಜಾರಿಗೆ ತರಬೇಕೆಂದು ಸರ್ಕಾರ ಆದೇಶಿಸಿದ್ದು, ಪ್ರತಿ ಗ್ರಾಪಂದಲ್ಲಿ ಕಡ್ಡಾಯವಾಗಿ ಗ್ರಾಮಸಭೆಗಳನ್ನು ನಡೆಸುವ ಮುಖೇನ ಸರ್ಕಾರ ನೀಡಿರುವ ಹಕ್ಕುಗಳನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು. ಸಮಗ್ರ ಮಕ್ಕಳ ಅಭಿವೃದ್ಧಿಯೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ನಂದಗುಡಿ ಗ್ರಾಪಂ ಅಧ್ಯಕ್ಷ ಸವಿತಾ ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯೆ ಸುಮಿತ್ರಾ, ಗ್ರಾಪಂ ಸದಸ್ಯ ವೀರರಾಜು, ಧರ್ಮೇಶ್, ಸಿಆರ್ಪಿ ಚಂದ್ರಣ್ಣ, ಪಿಡಿಒ ಮುನಿಗಂಗಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಹಾಡುಗಾರಿಕೆ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಯಿತು. ಇಟ್ಟಸಂದ್ರ ಗ್ರಾಪಂ ಪಿಡಿಒ ಕೃಷ್ಣಪ್ಪ,ಗ್ರಾಪಂ ಸದಸ್ಯ ಆಂಜಿನಮ್ಮ, ಸನಾವುಲ್ಲಾ ಸ್ಫೂರ್ತಿ ಸಂಸ್ಥೆಯ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಶಿವಮ್ಮ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿವನಾಪುರ, ತಾವರೆಕೆರೆ, ಮುಗಬಾಳ ಗ್ರಾಪಂದಲ್ಲಿ ಸಹ ಮಕ್ಕಳ ಗ್ರಾಮಸಭೆಗಳನ್ನು ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

