ಬಾಯಿ ಚಪಲಕ್ಕೆ ಹೇಮಾವತಿ ತರುವ ಎಂಬ ಹೇಳಿಕೆ ಬೇಡ: ಶಾಸಕ ಬಾಲಕೃಷ್ಣ
ಮಾಗಡಿ: ಬಾಯಿ ಚಪಲಕ್ಕೆ ಹೇಮಾವತಿ ತರುತ್ತೇನೆ ಎಂಬ ಹೇಳಿಕೆ ನೀಡಬಾರದು, ಹೇಮಾವತಿ ಜಲಾಶಯದಲ್ಲಿ ನೀರಿಲ್ಲ, ಮಾಗಡಿ ತಾಲೂಕಿಗೆ ಹೇಮಾವತಿ ನದಿ ಯೋಜನೆ ಅಸಾಧ್ಯ, ಎತ್ತಿನ ಹೊಳೆ ನದಿ ನೀರು ಹರಿಸಲು ತಾಂತ್ರಿಕವಾಗಿ ಸಾಧ್ಯವಾಗಲಿದ್ದು, ಮುಂಬರುವ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಬೆಂಬಲಿಸಿದರೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ, ತಾಲೂಕಿಗೆ ಎತ್ತಿನಹೊಳೆ ನದಿ ನೀರು ತರಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ನುಡಿದರು.
ಅವರು ತಾಲೂಕಿನ ಕುದೂರು ಹೋಬಳಿ ಮಾದಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಏನಿದ್ದರೂ ಕಾಂಗ್ರೆಸೇತರ ಸರ್ಕಾರದಿಂದ ಮಾತ್ರ ರೈತಪರ ಕಾರ್ಯಕ್ರಮ ಕೊಡಲು ಸಾಧ್ಯವಿದೆ. ರಾಮಕೃಷ್ಣ ಹೆಗಡೆ, ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ರೈತರ ಸಾಲ ಮನ್ನಾ ಆಗಿದ್ದು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ತೀರ ಬರಗಾಲ ಎದುರಿಸುತ್ತಿದ್ದರೂ ರೈತರ ಸಾಲ ಮನ್ನಾ ಮಾಡಲಿಲ್ಲ. ರಾಜ್ಯಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದರು.
ಮಾಟಮಂತ್ರ: ಕೆಪಿಸಿಸಿ ಸದಸ್ಯ ಎ.ಮಂಜು ಹತಾಶರಾದವರಂತೆ ಬಾಲಕೃಷ್ಣ ಅವರನ್ನು ಸೋಲಿಸುವುದೇ ನನ್ನ ಗುರಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಅವರೇನಾದರೂ ಮತದಾರರನ್ನು ಗುತ್ತಿಗೆ ಪಡೆದಿದ್ದಾರೆಯೇ ಅಥವಾ ಮಾಟ ಮಂತ್ರ ಮಾಡಿಸಿ ಸೋಲಿಸುತ್ತಾರೆಯೇ ಎಂದು ಬಾಲಕೃಷ್ಣ ಪ್ರಶ್ನಿಸಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಹಂಸಕುಮಾರಿ ಮಾತನಾಡಿದರು.
ಮಾದಿಗೊಂಡನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಗೌರಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಸವ ವಸತಿ ಯೋಜನೆ ಪಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಶಾಸಕ ಬಾಲಕೃಷ್ಣ ವಿತರಿಸಿದರು.
ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ಗಂಗಣ್ಣ, ರಂಗಸ್ವಾಮಿ ಮಾತನಾಡಿದರು. ಜಿ.ಪಂ. ಸದಸ್ಯ ವಿಜಯಕುಮಾರ್, ತಾ.ಪಂ. ಅದ್ಯಕ್ಷ ಬಿ.ಟಿ.ವೆಂಕಟೇಶ್, ಉಪಾಧ್ಯಕ್ಷೆ ಅನಿಸಾಖಾನಂ, ಸದಸ್ಯೆ ಅರುಂದತಿ ಚಿಕ್ಕಣ್ಣ, ವಿ.ನಾಗೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

