ಬೆಂಗಳೂರು ಗ್ರಾಮಾಂತರ

ಪಿಜಿಆರ್ ಸಿಂಧ್ಯಾರಿಂದ ಷಡ್ಯಂತ್ರ: ಡಿಕೆಶಿ ಆರೋಪ

Published On :

ಕನಕಪುರ: ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕನಕಪುರ ವಿಧಾನಸಭಾ ಕ್ಷೇತ್ರದ ಹತ್ತಾರು ಸಾವಿರ ಮತದಾರರ ಹೆಸರುಗಳನ್ನು ಚುನಾವಣಾ ಪಟ್ಟಿಯಿಂದ ಕೈಬಿಡುವಂತಹ ಷಡ್ಯಂತ್ರವನ್ನು ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಹಾಗೂ ಬೆಂಬಲಿಗರು ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಶಾಸಕ ಡಿ.ಕೆ.ಶಿವಕುಮಾರ್ ರಾಜ್ಯ ಚುನಾವಣಾ ಆಯೋಗಕ್ಕೆ  ದೂರು ನೀಡಿದ್ದಾರೆ.
ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ನೂರಾರು ಗ್ರಾಮಗಳಿಂದ ಹತ್ತಾರು ಸಾವಿರ ಯುವಜನರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಿದ್ದಾರೆ. ಆದರೆ ತಮ್ಮ ವಾಸ್ತವ್ಯಗಳನ್ನು ಗ್ರಾಮಗಳಲ್ಲಿಯೇ ಮಾಡಿಕೊಂಡಿದ್ದಾರೆ. ಇಂತಹ ಪ್ರಾಮಾಣಿಕ ಮತದಾರರನ್ನು ಗುರುತಿಸಿ ಫಾರಂ 7 ರಲ್ಲಿ ಜೆಡಿಎಸ್‌ನವರು ಸುಳ್ಳು ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಯತ್ನಿಸುತ್ತಿದ್ದು ಕ್ಷೇತ್ರದ ಮತದಾರರಲ್ಲಿ ಅನಗತ್ಯ ಗೊಂದಲ, ಭೀತಿ ಹಾಗೂ ಪ್ರಲೋಭನೆಗಳನ್ನು ಒಡ್ಡುತ್ತಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.
 ಈ ಗಂಭೀರ ವಿಚಾರದ ಬಗ್ಗೆ ಚುನಾವಣಾ ಆಯುಕ್ತ ಅನಿಲ್‌ಕುಮಾರ್ ಝಾ ಸೂಕ್ತಕ್ರಮ ಕೈಗೊಳ್ಳಬೇಕೆಂದು ಡಿಕೆಶಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.