ಬೆಂಗಳೂರು ಗ್ರಾಮಾಂತರ

ಸೂಲಿಬೆಲೆ ಗಣ ರಾಜ್ಯೋತ್ಸವದಲ್ಲಿ ವಿವಿಧತೆಯಲ್ಲಿ ಏಕತೆ

Published On :




ಸೂಲಿಬೆಲೆ: ವಿವಿಧತೆಯಲ್ಲಿ ಏಕತೆಯನ್ನು  ಸಾರುವ ಗಣರಾಜ್ಯೋತ್ಸವ ಸಮಾರಂಭವನ್ನು ಒಂದೇ ಆವರಣದಲ್ಲಿ ಪ್ರತ್ಯೇಕವಾಗಿ ಆಚರಣೆ ಮಾಡವ ಮೂಲಕ  ಶಾಲೆ ಮಕ್ಕಳಲ್ಲಿಯೇ ಶಿಕ್ಷಕರು ಪ್ರತ್ಯೇಕತೆಯನ್ನು ಬಿತ್ತಿರುವ ಘಟನೆ ಸೂಲಿಬೆಲೆಯಲ್ಲಿ ನಡೆದಿದೆ.ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ 64ನೇ ಗಣರಾಜ್ಯೋತ್ಸವದಲ್ಲಿ  ಕನ್ನಡ ಶಾಲೆಯ ವಿದ್ಯಾರ್ಥಿಗಳೊಂದಿಗೆ ಪಥ ಸಂಚಲನ ನಡೆಸಿದ ನಂತರ  ಇದೇ ಶಾಲೆ ಆವರಣದಲ್ಲಿರುವ ಉರ್ದು ಶಾಲೆಯ ಶಿಕ್ಷಕರು ಮತ್ತು ಎಸ್‌ಡಿಎಂಸಿಯವರು ತಮ್ಮ ವಿದ್ಯಾರ್ಥಿಗಳನ್ನು ಆ ವೇದಿಕೆಯ  ಸಮಾರಂಭದಿಂದ ಬೇರ್ಪಡಿಸಿ ಪ್ರತ್ಯೇಕವಾಗಿ ಆಚರಣೆ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಆವರಣದಲ್ಲಿರುವ ಉರ್ದು ಶಾಲೆಯವರು ಪ್ರತ್ಯೇಕವಾಗಿ ಆಯೋಜಿಸುವ ಮುಖೇನ ತಮ್ಮನ್ನು ತಾವು ಪ್ರತ್ಯೇಕಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.