ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಗೆಲವು ಖಚಿತ
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಸರ್ಕಾರ ರಚಿಸುವುದು ಖಚಿತ. ಕಾರಣ ನರೇಂದ್ರ ಮೋದಿಯವರು ಈ ಬಾರಿ ಪ್ರಧಾನಿ ಅಭ್ಯರ್ಥಿಯಾಗಿದ್ದು ಇದನ್ನು ರಾಷ್ಟ್ರದ ಶೇ. 58 ರಷ್ಟು ಜನತೆ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ ತಿಳಿಸಿದರು.
ಅವರು ಪಟ್ಟಣದ ಬಿ.ಎಂ.ಎಸ್ ಸಮುದಾಯ ಭವನದಲ್ಲಿ ನಡೆದ ದೇವನಹಳ್ಳಿ ತಾಲೂಕು ಬಿಜೆಪಿ ನೂತನ ಅಧ್ಯಕ್ಷರ ಪದವಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಎ.ರವಿ ಮಾತನಾಡುತ್ತಾ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ತಮ್ಮ ಜವಾಬ್ದಾರಿಯನ್ನು ಅರಿತು ಲೋಕಸಭಾ ಚುನಾವಣೆಗೆ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಹಾಗೂ ಬೇರು ಮಟ್ಟದಿಂದ ಪಕ್ಷ ಬಲಪಡಿಸಿ ಸಂಘಟನೆಯಲ್ಲಿ ತೊಡಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಇದನ್ನು ಜನ ಸಾಮಾನ್ಯರು ಮನಗಾಣಬೇಕು. ಇದರ ವಿರುದ್ಧನ್ಯಾಯಕ್ಕಾಗಿ ಎಲ್ಲರೂ ಹೋರಾಡಬೇಕು ಎಂದರು.
ಬಿಜೆಪಿ ತಾಲೂಕು ನೂತನ ಅಧ್ಯಕ್ಷರಾಗಿ ಎನ್.ರಾಜ್ಗೋಪಾಲ್, ಜಿ.ನಾರಾಯಣಸ್ವಾಮಿ ಮತ್ತು ಗೋಪಿ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ್, ತಾಲೂಕು ನಿಕಟ ಪೂರ್ವ ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿದರು.
ಕಾರ್ಯದರ್ಶಿ ದೇ.ಸು.ನಾಗರಾಜ್, ಜಿಲ್ಲಾ ಎಸ್ಟಿ ಘಟಕದ ಉಪಾಧ್ಯಕ್ಷ ಮಾಸಪ್ಪ, ಪಟ್ಟಣದ ಅಧ್ಯಕ್ಷ ರಾಮಕೃಷ್ಣ ಹೆಗೆಡೆ, ರಾಮು ಭಗವಾನ್, ನಾರಾಯಣಸ್ವಾಮಿ, ಮುನೇಗೌಡ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

