ಬೆಂಗಳೂರು ಗ್ರಾಮಾಂತರ

ಶಿಕ್ಷಣ ಫೌಂಡೇಷನ್ ಸೇವೆ ಸ್ಮರಣೀಯ

Published On :

ಸೂಲಿಬೆಲೆ: ಹೊಸಕೋಟೆ ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ದುಡಿಯುತ್ತಿರುವ ಶಿಕ್ಷಣ ಫೌಂಡೇಷನ್ ಸೇವೆ ಸ್ಮರಣೀಯವಾಗಿದೆ ಎಂದು ಸೂಲಿಬೆಲೆ ಕ್ಲಸ್ಟರ್ ಸಂಪನ್ಮೂಲಾಧಿಕಾರಿ ಮುತ್ತುರಾಜ್ ಹೇಳಿದ್ದಾರೆ.
ಸೂಲಿಬೆಲೆ ಬಳಿಯ ಅತ್ತಿಬೆಲೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶಿಕ್ಷಣ ಫೌಂಡೇಷನ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಣ ತೇರು ಶಾಲೆಯೆಡೆಗೆ ಹಾಗೂ ಪರಿಸರ ದಿನಾಚರಣೆ, ತಳಿರು ತೋರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಸ್ಥೆಯ ತಾಲೂಕು ಸಂಯೋಜಕ ಚೇತನ್ ಮಾತನಾಡಿ, ಹೊಸಕೋಟೆ ತಾಲೂಕಿನ ನಾನಾ ಶಾಲೆಗಳಿಗೆ ಸಂಸ್ಥೆವತಿಯಿಂದ ಶೈಕ್ಷಣಿಕ ಪ್ರಗತಿಗೆ ಅಗತ್ಯವಾಗಿರುವ ಹಲವಾರು ಸೌಲಭ್ಯ ನೀಡಲಾಗುತ್ತಿದ್ದು, ಬರವಣಿಗೆ ಶೈಲಿ ವೃದ್ಧಿಗಾಗಿ ಉಚಿತ ಹಾಳೆಗಳನ್ನು ನೀಡಲಾಗುತ್ತಿದೆ. ಪ್ರತಿಭಾವಂತ ಮಕ್ಕಳಿಗೆ ಕಂಪ್ಯೂಟರ್, ದೆಹಲಿ ಪ್ರವಾಸ ಇತ್ಯಾದಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಪ್ರಗತಿಗೆ ವಾರ್ಷಿಕ ಗುರಿ ಹೊಂದಲಾಗಿದೆ. ಜು.13ರಂದು ದೆಹಲಿ ಪ್ರವಾಸಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಮಕ್ಕಳು ಸಿದ್ಧರಾಗಬೇಕು ಎಂದರು.
ಮುಖ್ಯ ಶಿಕ್ಷಕ ಶರಣಪ್ಪ ಕಂಬಳಿ, ಶಾಲಾಭಿವೃದ್ಧಿ ಸಮಿತಿ ಸದಸ್ಯ ನಾರಾಯಣಗೌಡ, ಸೂಲಿಬೆಲೆ ಪದವಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರಶಾಂತ್ ಮಾತನಾಡಿದರು. ಇದಕ್ಕೂ ಮುನ್ನ ಶಾಲೆ ಮಕ್ಕಳ ಶಿಕ್ಷಣ ಹಾಗೂ ಪರಿಸರ ಜಾಗೃತಿಯನ್ನುಂಟುಮಾಡುವ ದೃಷ್ಠಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ಅಂಗಳದಲ್ಲಿ ಸಸಿಗಳನ್ನು ನೆಡಲಾಯಿತು. ಶಿಕ್ಷಣ ಫೌಂಡೇಷನ್ ವತಿಯಿಂದ ಶಾಲೆಗೆ ಉಚಿತ ಕಂಪ್ಯೂಟರ್ ಸೇರಿದಂತೆ ಹಲವು ಸೌಲಭ್ಯಗಳನ್ನು ಬಿಡುಗಡೆ ಮಾಡಲಾಯಿತು. ನಾರಾಯಣಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುಬ್ರಹ್ಮಣ್ಯ, ಗ್ರಾಪಂ ಸದಸ್ಯ ಅಶ್ವತ್ಥಪ್ಪ, ಶ್ರೀನಿವಾಸ್, ಮುನಿರಾಜ್, ಶಿಕ್ಷಣ ಪೌಂಡೇಷನ್‌ನ ಹರೀಶ್, ಸುನೀಲ್, ಮಾರೇಗೌಡ, ರಮೇಶ್ ಸೇರಿದಂತೆ ಹಲವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.