ಬೆಂಗಳೂರು ಗ್ರಾಮಾಂತರ

ಸರ್ಕಾರಿ ಸವಲತ್ತು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಜನರಿಗೆ ಸಲಹೆ

Published On :

ಮಾಗಡಿ: ಸರ್ಕಾರಿ ಯೋಜನೆಗಳನ್ನು ಪಲಾನುಭವಿಗಳು ಸಮರ್ಪಕವಾಗಿ ಬಳಸಿಕೊಳ್ಳುವಂತೆ ನೇತೇನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎನ್.ಕೆ. ದಶರಥ ಕರೆ ನೀಡಿದರು.
ಅವರು ತಾಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯ್ತಿಯ ಮೊದಲ ಸುತ್ತಿನ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈಗಾಗಲೇ ಪಂಚಾಯ್ತಿ ವತಿಯಿಂದ ಆಶ್ರಯ ಪಲಾನುಭವಿಗಳ ಪಟ್ಟಿ ತಯಾರಿಸಲಾಗಿದೆ. ವಿವಿಧ ಯೋಜನೆಯಡಿ ಪಲಾನುಭವಿಗಳು  ಅರ್ಜಿ ಸಲ್ಲಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಮೊದಲ ಆದ್ಯತೆ ನೀಡಿದ್ದೇನೆ.
ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಪಲಾನುಭವಿಗಳಿಗೆ ಸೌಲತ್ತು ನೀಡಲು ಶಕ್ತಿ ಮೀರಿ ಶ್ರಮಿಸುತ್ತೇನೆ. ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಆಟದ ಮೈದಾನ, ಅಂಗನವಾಡಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.
ಗ್ರಾಮ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಶಿಸ್ತಿ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ವಿವರಿಸಿದರು. ನಿಯೋಜಿತ ಯೋಜನಾಧಿಕಾರಿ  ಎಂ.ವಿ. ಚಂದ್ರಶೇಖರ್  ಸರ್ಕಾರ ವಿವಿಧ ಯೋಜನೆಗಳ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ  ಗ್ರಾಮ ಸ್ವರಾಜ್ ಮತ್ತು  ನರೇಗ ಹಾಗೂ 13ನೇ ಹಣಕಾಸಿನ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು. ಪಂಚಾಯ್ತಿ ಉಪಾಧ್ಯಕ್ಷೆ ಹುಚ್ಚಮ್ಮ, ನಾಗರಾಜು, ಗಂಗಮ್ಮ, ತಿಮ್ಮಮ್ಮ, ಕೆ.ಸ್ವಾಮಿ, ಯಶೋಧಮ್ಮ, ಜಯಮ್ಮ, ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.