ಬೆಂಗಳೂರು ಗ್ರಾಮಾಂತರ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ

Published On :

ಕ.ಪ್ರ.ವಾರ್ತೆ  ರಾಮನಗರ  ಜು.8
ವರ್ಗಾವಣೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಹಂತದ ವರ್ಗಾವಣೆ ಪ್ರಕ್ರಿಯೆ ನಗರದ ಗುರುಭವನದಲ್ಲಿ ಸೋಮವಾರ ಪ್ರಾರಂಭಗೊಂಡಿತು.  ವರ್ಗಾವಣೆ ಪ್ರಕ್ರಿಯೆಯಲ್ಲಿ ಎರಡು ನಿಯಮಗಳನ್ನು ಅನುಸರಿಸಲಾಗಿತ್ತು. 2000 ಇಸವಿಗೆ  ಮೊದಲು ಶಿಕ್ಷಕರಾಗಿ ಕೆಲಸಕ್ಕೆ ಸೇರಿದ್ದವರು ಜಿಲ್ಲೆಯಲ್ಲಿ ಎಲ್ಲಿ ಬೇಕಾದರೂ ವರ್ಗಾವಣೆಯಾಗಬಹುದು. 2001ರ ನಂತರ ಶಿಕ್ಷಕರ ಕೆಲಸಕ್ಕೆ ಸೇರಿದವರು ತಾವು ಕೆಲಸ ನಿರ್ವಹಿಸುತ್ತಿರುವ ತಾಲೂಕು ವ್ಯಾಪ್ತಿಯಲ್ಲಿ ವರ್ಗಾವಣೆ ಪಡೆದುಕೊಳ್ಳಬಹುದಾಗಿತ್ತು. ಜಿಲ್ಲೆಯಲ್ಲಿ 147 ಮಂದಿಗೆ ಮಾತ್ರ ವರ್ಗಾವಣೆಗೆ ಅವಕಾಶವಿದ್ದು, ಒಟ್ಟು 429 ಮಂದಿ ಶಿಕ್ಷಕರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದರು. ಮೊದಲು ಅರ್ಜಿ ಸಲ್ಲಿಸಿದ್ದ 200 ಮಂದಿ ಶಿಕ್ಷಕರ ಕೌನ್ಸೆಲಿಂಗ್ ಮುಗಿದಿದ್ದು, 9 ದೈಹಿಕ ಶಿಕ್ಷಕರು ಮತ್ತು 14 ಮಂದಿ ಮುಖ್ಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿದೆ.  ಆದ್ಯತೆ ಮೇರೆಗೆ ವರ್ಗಾವಣೆ ನಡೆಯುತ್ತಿದ್ದು, ಮೊದಲು ಪತಿ-ಪತ್ನಿಯರು, ವಿಧವೆಯರು ನಂತರ ಮಾಜಿ ಸೈನಿಕರ ಪತ್ನಿಯರು, ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗಿದೆ. ಮಂಗಳವಾರ ಗಂಡಸರಿಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ರಾಜ್ಯದಲ್ಲಿ ಏಕ ಕಾಲದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆನ್‌ಲೈನ್ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಹ್ಲಾದ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮುನಿಕೆಂಪೇಗೌಡ, ಶಿವಪ್ಪ, ಶಿವಕುಮಾರ್, ರಂಗನಾಥಸ್ವಾಮಿ ಮತ್ತಿತರರು ಕೌನ್ಸೆಲಿಂಗ್‌ನಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.