ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕರ ದಿಢೀರ್ ಭೇಟಿ
ಕ.ಪ್ರ. ವಾರ್ತೆ ಮಾಗಡಿ ಜು.8
ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಚ್.ಸಿ. ಬಾಲಕೃಷ್ಣ ಆಸ್ಪತ್ರೆಯಲ್ಲಿನ ಸಮಸ್ಯೆ ಕುರಿತು ವೈದ್ಯಾಧಿಕಾರಿ ಕೆ.ಎಸ್. ಪ್ರಕಾಶ್ ಅವರಲ್ಲಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವೈದ್ಯರು ಮತ್ತು ಸಿಬ್ಬಂದಿಗಳು ವರ್ತಿಸಬೇಕು. ಸೇವಾ ಮನೋಭಾವ ಇರಲಿ, ರಕ್ತ, ಮಲ, ಇತರೆ ಪರೀಕ್ಷೆಯನ್ನು ಆಸ್ಪತ್ರೆಯಲ್ಲಿಯೇ ಮಾಡಬೇಕು. ಆಸ್ಪತ್ರೆಯಲ್ಲಿ ಮೂಲಭೂತ ಸಮಸ್ಯೆಗಳಿದ್ದರೆ ಕೂಡಲೆ ಮಾಹಿತಿ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದರು.
ತಾಲೂಕಿನ ಮಳೆ ಪ್ರಮಾಣ ಕಡಿಮೆಯಾಗಿದ್ದು, ಡೆಂಘಿಯಿಂದ ಕೆಲವರು ಮೃತಪಟ್ಟಿದ್ದಾರೆ. ಈ ನಿಟ್ಟಿನಲ್ಲಿ
ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದಿರುವುದಾಗಿ ಶಾಸಕ ಎಚ್.ಸಿ. ಬಾಲಕೃಷ್ಣ ವಿವರಿಸಿದರು. ಸಾಮಾನ್ಯ ರೋಗಿಗಳ ತಪಾಸಣೆಗೆ ವೈದ್ಯರು ದಿನದ 24 ಗಂಟೆ ಸೇವೆ ನೀಡುವಂತೆ ಆದೇಶಿಸಿರುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿನ ವೈದ್ಯರು ಉತ್ತಮ ರೀತಿಯಲ್ಲಿ ಸೇವಾ ಮನೋಭಾವದಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇರುವ ವೈದ್ಯರ ಕೊರತೆ ತಂಬಲು ಸಂಬಂಧಪಟ್ಟ ಡಿಎಚ್ಓ ಅವರಲ್ಲಿ ಚರ್ಚಿಸಿ ಆದಷ್ಟು ಬೇಗ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ವಹಿಸುತ್ತೇನೆ. ವೈದ್ಯರುಗಳು ನಿಗದಿತ ಸಮಯಕ್ಕೆ ಕರ್ತವ್ಯ ಹಾಜರಾಗಬೇಕು. ಹಾಜರಾತಿ ಪುಸ್ತಕವನ್ನು ತಿಂಗಳಿಗೊಮ್ಮೆ ಪರಿಶೀಲಿಸುವುದಾಗಿ ಶಾಸಕರು ವಿವರಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ ರೋಗಿಗಳ ಯೋಗಕ್ಷೇವ ವಿಚಾರಿಸಿದರು.ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾಗಿ ಬಾಲಕೃಷ್ಣ ತಿಳಿಸಿದರು. ಇದೇ ಸಂದರ್ಭದಲ್ಲಿ ವೈದ್ಯರ ಸಮಸ್ಯೆಗಳನ್ನು ಆಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

