ಬೆಂಗಳೂರು ಗ್ರಾಮಾಂತರ

ನೀರಿನ ಬವಣೆ ತಗ್ಗಿಸಲು ಪ್ರಥಮ ಆದ್ಯತೆ

Published On :

ಕ.ಪ್ರ.ವಾರ್ತೆ  ದೊಡ್ಡಬಳ್ಳಾಪುರ  ಜು.8
ತಾಲೂಕಿನ ನೀರಿನ ಬವಣೆಯನ್ನು ತಗ್ಗಿಸಲು ಪ್ರಥಮ ಆದ್ಯತೆ ನೀಡಿ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ತಾಲೂಕಿನಾದ್ಯಂತ ಕೊಳವೆ ಬಾವಿಗಳನ್ನು ಕೊರೆಸುವ ಕಾರ್ಯ ಭರದಿಂದ ಸಾಗಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.
ತಾಲೂಕಿನ ರಾಜಘಟ್ಟ ಮತ್ತು ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರ ಕೃತಜ್ಞತಾ ಸಭೆಗಳನ್ನು ನಡೆಸಿ ಅವರು ಮಾತನಾಡಿದರು.
ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಕ್ಕಲಮಡಗು ಯೋಜನೆ ಪೂರ್ಣಗೊಂಡಿದ್ದು ಕೆಲವೇ ತಿಂಗಳಲ್ಲಿ ನಗರಕ್ಕೆ ನೀರು ಲಭ್ಯವಾಗಲಿದೆ. ಶಾಶ್ವತ ನೀರಾವರಿ ಈ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಿದ್ದು ಯೋಜನೆ ಜಾರಿಗೆ ಸರ್ಕಾರ ಸಿದ್ಧವಾಗಿದೆ ಎಂದರು. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು. ಕ್ಷೇತ್ರದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಕಾರ್ಯಗತ ಮಾಡಬೇಕಿದೆ ಎಂದರು.
ಬಲಪಡಿಸಲು ಕ್ರಮ: ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮಾತನಾಡಿ, ಮತದಾರರ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡುವ ಜವಾಬ್ದಾರಿ ಶಾಸಕರ ಮೇಲಿದೆ. ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆಗಳು, ನೀರಿನ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಬೇಕು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ಸರಾಗವಾಗಿ ಆಗುವಂತೆ ಕ್ರಮ ಕೈಗೊಳ್ಳಬೇಕು. ಅದೇ ರೀತಿ ಮುಂದಿನ ವರ್ಷ ಲೋಕಸಭಾ ಚುನಾವಣೆಗಳು ನಡೆಯಲಿದ್ದು ಪಕ್ಷವನ್ನು ತಾಲೂಕಿನಲ್ಲಿ ಬೇರುಮಟ್ಟದಿಂದ ಬಲಪಡಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ನೇರವಾಗಿ ತಲುಪಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕಳೆದ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ. ಈ ಬಾರಿ ತಾಲೂಕಿಗೆ ವಿಶೇಷ ಅನುದಾನಗಳ ನೆರವಿನಿಂದ ಅಭಿವೃದ್ಧಿ ಸಮತೋಲನ ಕಾಪಾಡಿಕೊಳ್ಳಬೇಕು. ಜನರ ಸಹಕಾರ ಕೂಡ ಈ ಹಂತದಲ್ಲಿ ಮುಖ್ಯ ಎಂದರು.
 ಕಾಂಗ್ರೆಸ್ ಮುಖಂಡರಾದ ಜಿ.ಲಕ್ಷ್ಮಿಪತಿ, ಬೈರೇಗೌಡ, ಜಯಲಕ್ಷ್ಮಮ್ಮ, ನಾರಾಯಣಗೌಡ, ನಾರಾಯಣ, ಕೆ.ಜಿ.ರಘುರಾಂ, ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.