ಬೆಂಗಳೂರು ಗ್ರಾಮಾಂತರ

ರಸ್ತೆ ನಿರ್ಮಾಣ ಕಾಮಗಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಅಡ್ಡಿ

Published On :

ಕ.ಪ್ರ.ವಾರ್ತೆ ಟಿ ರಾಮನಗರ ಟಿ ಜು.9
ರಸ್ತೆ ನಿರ್ಮಾಣ ಕಾಮಗಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ನೇತೃತ್ವದಲ್ಲಿ ಗೌರೀಪುರ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಬಿಡದಿ ಬಳಿಯ ವಂಡರ್‌ಲಾ ಗೇಟ್ ಬಳಿ ಜಮಾಯಿಸಿದ ಗ್ರಾಮಸ್ಥರು ವಾಜರಹಳ್ಳಿ ಕಾಲೋನಿಯಿಂದ ಗೌರೀಪುರದವರೆಗೆ ಮಂಜೂರಾಗಿರುವ ರಸ್ತೆ ಕಾಮಗಾರಿಗೆ ತಡೆ ಒಡ್ಡಿರುವ ಅರಣ್ಯಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ನಿರ್ಮಾಣಕ್ಕೆ ಸೇರಿರುವ ಜಾಗ ಗೋಮಾಳಕ್ಕೆ ಸೇರಿದ್ದಾಗಿದೆ ಎಂದು ಕಂದಾಯ ಇಲಾಖೆ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ದಣಢೀಕರಿಸಿದ್ದಾರೆ. ಆದರೂ ಸಹ ಅರಣ್ಯ ಇಲಾಖೆಗೆ ಈ ಜಾಗ ಸೇರಿದ್ದೆಂದು ಅಧಿಕಾರಿಗಳು ಕ್ಯಾತೆ ತೆಗೆದಿದ್ದಾರೆ.  ಈ ವ್ಯಾಪ್ತಿಯ ಗ್ರಾಮಸ್ಥರ ಹಿತದೃಷ್ಟಿಯಿಂದ ಇದೇ ಜಾಗದಲ್ಲಿಯೇ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಈ ವೇಳೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಮಾತನಾಡಿ, ವಾಜರಹಳ್ಳಿ ಕಾಲೋನಿಯಿಂದ ಗೌರೀಪುರದವರೆಗಿನ 2.6 ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲು ರು.50 ಲಕ್ಷ ಮಂಜೂರಾಗಿದ್ದು, ಟೆಂಡರ್ಮೂಲಕ ಗುತ್ತಿಗೆ ನೀಡಲಾಗಿದೆ ಎಂದರು.
ಕಳೆದ 25 ವರ್ಷದಿಂದಲೂ ಇಲ್ಲಿ ರಸ್ತೆ ಇದೆ. ನಿತ್ಯವೂ ಐದಾರು ಬಿಎಂಟಿಸಿ ಬಸ್‌ಗಳು ಓಡಾಡುತ್ತಿವೆ. ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಇದನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ರಸ್ತೆ ಇರುವ ಜಾಗವು ಅರಣ್ಯ ಇಲಾಖೆಗೆ ಸೇರಿದೆ ಎಂದು ಕಾಮಗಾರಿಗೆ ಅಡ್‌ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅರಣ್ಯಾಧಿಕಾರಿಗಳು ಕಾಮಗಾರಿಗೆ ಅಡ್‌ಡಿಪಡಿಸಿದ್ದಲ್ಲದೆ, ಗುತ್ತಿಗೆದಾರನಿಗೆ ಧಮಕಿ ಹಾಕಿದ್ದಾರೆ. ಇಲ್ಲಿನ ಜನರಿಗೆ ವಿನಾಕಾರಣ ತೊಂದರೆ ನೀಡುತ್ತಿರುವ ಅರಣ್ಯ ಇಲಾಖೆಗೂ ರಸ್ತೆ ನಿರ್ಮಿಸುತ್ತಿರುವ ಜಾಗಕ್ಕೂ ಯಾವುದೇ ಸಂಬಂಧ ಇಲ್ಲ. ಕಾಮಗಾರಿಗೆ ಮತ್ತೊಮ್ಮೆ ಅಡ್ಡಿಪಡಿಸಲು ಯತ್ನಿಸಿದರೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ, ಶೇಷಗಿರಿಹಳ್ಳಿ ಶೇಷಪ್ಪ, ರಮೇಶ್, ನರಸಿಂಹ, ನರಸಿಂಹಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.