ಬೆಂಗಳೂರು ಗ್ರಾಮಾಂತರ

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಅಧಿಸೂಚನೆ

Published On :

ರಾಮನಗರ: ರಾಜ್ಯ ಸರ್ಕಾರಿ ನೌಕರರ ಸಂಘದ 2013-18ರ ಅವಧಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಸಲು ಜು.15 ಕಡೆಯ ದಿನವಾಗಿದೆ. ಅದೇ ದಿನ ಸಂಜೆ 5ರ ನಂತರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜು.16 ನಾಮಪತ್ರ ವಾಪಸ್ಪ್‌ಡೆಯಲು ಕಡೆಯ ದಿನ. ಜು.22ರ ಸೋಮವಾರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 4.30ಕ್ಕೆ ಮತ ಎಣಿಕೆ ನಡೆಯಲಿದ್ದು ನಂತರ ಫಲಿತಾಂಶ ಪ್ರಕಟಿಸಲಾಗುವುದು. ನಾಮಪತ್ರಗಳನ್ನು ಸಂಘದ ಜಿಲ್ಲಾ ಕಚೇರಿಯಲ್ಲಿ ವಿತರಣೆ ಮಾಡಲಾಗುವುದು. ಚುನಾವಣಾ ಪ್ರಕ್ರಿಯೆ ಸಂಬಂಧ ಸಂಘದ ಕಚೇರಿಯು ರಜಾ ದಿನಗಳಂದು ಸಹ ತೆರೆದಿರುತ್ತದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಪಿ.ಜಯರಾಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.