11ರಂದು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ
ರಾಮನಗರ: ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಪೌರಕಾರ್ಮಿಕರು, ವಾಟರ್ಮೆನ್ ಹಾಗೂ ಆರೋಗ್ಯ ಇಲಾಖೆಯ ನಾನ್ ಕ್ಲಿನಿಕಲ್ ಕಾರ್ಮಿಕರ ಕಾಯಮಾತಿಯನ್ನು ಈ ಬಾರಿಯ ಬಜೆಟ್ನಲ್ಲಿ ಘೋಷಿಸುವಂತೆ ಆಗ್ರಹಿಸಿ ಜು.11ರಂದು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಗುತ್ತಿಗೆ ಪೌರಕಾರ್ಮಿಕರ ಸಂಘದ ಗೌರವಾಧ್ಯಕ್ಷ ಎಂ.ಬಿ.ನಾಗಣ್ಣ ತಿಳಿಸಿದರು.
ಕಳೆದ 18 ವರ್ಷದಿಂದ ರಾಜ್ಯದ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಮತ್ತು ನಗರಪಾಲಿಕೆಗಳಲ್ಲಿ 40 ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಅಂತೆಯೇ ಸರ್ಕಾರಿ ಆಸ್ಪತ್ರೆಗಳನ್ನು ಸ್ವಚ್ಛಗೊಳಿಸುವ ಕಾರ್ಮಿಕರ ಪರಿಸ್ಥಿತಿ ಇದಕ್ಕಿಂತ ಭಿನವಾಗೇನಿಲ್ಲ ಎಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಸಮಾಜವಾದಿ ಹಿನ್ನೆಲೆಯುಳ್ಳ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದರಿಂದ ಕಾರ್ಮಿಕ ವಲಯದಲ್ಲಿ ಹೊಸ ನಿರೀಕ್ಷೆ ಆರಂಭವಾಗಿದೆ. ಜತೆಗೆ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಗುತ್ತಿಗೆ ಪೌರಕಾರ್ಮಿಕರನ್ನು ಜು.12ರಂದು ಮಂಡಿಸಲಿರುವ ಬಜೆಟ್ನಲ್ಲಿ ಖಾಯಮಾತಿಯನ್ನು ಘೋಷಿಸಬೇಕು ಎಂದು ಆಗ್ರಹಿಸಿದರು. ಕಾಯಂಗೊಳಿಸುವ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ರಾಜ್ಯದ ವಸತಿ ಯೋಜನೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ಶೇಕಡಾ 10ರಷ್ಟು ವಸತಿ ಮೀಸಲಿರಿಸಬೇಕು. ಕನಿಷ್ಠ ವೇತನ ಜಾರಿಯಾಗಿಲ್ಲದ ಕಡೆಗಳಲ್ಲಿ ತತ್ಕ್ಷಣದಿಂದ ಕನಿಷ್ಠ ವೇತನ ಜಾರಿಗೊಳಿಸಬೇಕು. ಎಲ್ಲಾ ಇಲಾಖೆಗಳಲ್ಲೂ ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು ಎಂದು ಜು.11ರ ಬೆಳಗ್ಗೆ 10ಕ್ಕೆ ನಗರದ ಮಿನಿ ವಿಧಾನಸೌಧ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಎಂ.ಬಿ.ನಾಗಣ್ಣ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

