ಬಾಲಕಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಬಿಟ್ಟ ದುಷ್ಕರ್ಮಿಗಳು
ಚನ್ನಪಟ್ಟಣ: ಅಪ್ರಾಪ್ರ ಬಾಲಕಿಯೊಬ್ಬಳನ್ನು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿ, ಪ್ರಜ್ಞಾಹೀನಳಾದ ಆಕೆಯನ್ನು ನಿರ್ಜನ ಸ್ಥಳದಲ್ಲಿ ಬಿಸಾಡಿ ಹೋಗಿರುವ ಘಟನೆ ಮಂಗಳವಾರ ನಡೆದಿದೆ.
ಪಟ್ಟಣದ ಕಲಾನಗರದ ವಾಸಿಯಾಗಿರುವ 14 ವರ್ಷದ ಬಾಲಕಿ ತನ್ನ ಸ್ನೇಹಿತೆಯ ಮನೆಗೆ ಹೋಗುತ್ತಿರುವಾಗ ಆಗಂತುಕರು ಅಪಹರಣ ಮಾಡಿದ್ದಾರೆ. ಕಳೆದ ರಾತ್ರಿ ಅಪಹರಣಕ್ಕೊಳಗಾದ ಬಾಲಕಿ ಪಟ್ಟಣದ ಮುನಿಯಪ್ಪನ ದೊಡ್ಡಿ ರಸ್ತೆಯಲ್ಲಿನ ಪಾಳು ನಿವೇಶನದಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಸ್ಥಳೀಯರು ಆಕೆಯ ಕುಟುಂಬದವರಿಗೆ ಮಾಹಿತಿ ನೀಡಿದ ಬಳಿಕ ಬಾಲಕಿಯನ್ನು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಅತ್ಯಾಚಾರದ ಶಂಕೆ: ಪಟ್ಟಣದ ಕಲಾನಗರದಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿಯ ಅಪಹರಣದ ಪ್ರಕರಣದ ಸುತ್ತಾ ಅತ್ಯಾಚಾರ ನಡೆದಿರುವ ಶಂಕೆ ಮೂಡಿದೆ. ಕಳೆದ ರಾತ್ರಿ ಅಪಹರಣಕ್ಕೊಳಗಾದ ಬಾಲಕಿ ಇಂದು ಬೆಳಗಿನ ಜಾವದ ವರೆಗೆ ನಾಪತ್ತೆಯಾಗಿದ್ದು ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅತ್ಯಾಚಾರದ ಪ್ರಕರಣಕ್ಕೆ ಪುಷ್ಟಿ ನೀಡಿದೆ.
ಬಾಲಕಿಯನ್ನು ಅಪಹರಣ ಮಾಡಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿರುವ ಉದ್ದೇಶ ಏನೆಂಬುದು ನಿಗೂಢವಾಗಿ ಉಳಿದಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆದಿದ್ದು ಕೆಲ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಅಲ್ಲಿಂದ ವರದಿ ಬಂದ ಬಳಿಕ ಅತ್ಯಾಚಾರ ನಡೆದಿರುವ ಸತ್ಯಾಸತ್ಯತೆ ಬಹಿರಂಗವಾಗಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

