ಬೆಂಗಳೂರು ಗ್ರಾಮಾಂತರ

ಇಂದು ಗ್ರಾಹಕರ ಸಭೆ

Published On :

ರಾಮನಗರ: ಬೆಸ್ಕಾಂನಿಂದ ಜು.10ರ ಮಧ್ಯಾಹ್ನ 3 ರಿಂದ 5.30ರವರೆಗೆ ಚನ್ನಪಟ್ಟಣ ನಗರ ಉಪ ವಿಭಾಗೀಯ ಕಚೇರಿ ಆವರಣದಲ್ಲಿ ಗ್ರಾಹಕರ ಸಭೆ ನಡೆಯಲಿದೆ. ತಾಲೂಕಿನ ಬೆಸ್ಕಾಂ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ನಗರ ಉಪ ವಿಭಾಗದ ಎಇಇ  ತಿಳಿಸಿದ್ದಾರೆ.
ದತ್ತಿ ಸ್ಥಾಪನೆ
ರಾಮನಗರ: ಜಿಎಸ್‌ಎಸ್ ಮೂರ್ತಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ ಪ್ರದಾನದ ಸಲುವಾಗಿ ರು.1 ಲಕ್ಷ ಹಾಗೂ ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರಧಾನದ ಸಲುವಾಗಿ ರು.1 ಲಕ್ಷ ದತ್ತಿಯನ್ನು ಸ್ಥಾಪಿಸಿರುತ್ತಾರೆ. ಈ ಎರಡೂ ದತ್ತಿಯಿಂದ ಸಂಗ್ರಹವಾಗುವ ಬಡ್ಡಿ ಹಣದಿಂದ ಪ್ರತಿ ವರ್ಷ ಶ್ರೇಷ್ಠ ಕಾದಂಬರಿಗೆ ರು.5 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಈ ಬಹುಮಾನಗಳಿಗಾಗಿ ಅರ್ಹ ಕಾದಂಬರಿಗಾರರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.  2012ನೇ ಸಾಲಿನಲ್ಲಿ ಪ್ರಕಟವಾದ ಶ್ರೇಷ್ಠ ಕಾದಂಬರಿಯನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು. ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಮಾತ್ರ ಕಳುಹಿಸಬೇಕು. ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರ ಶಿಫಾರಸು ಅಂತಿಮವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ಪುಸ್ತಕಗಳನ್ನು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ. ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಆ.30 ಕೊನೆಯ ದಿನ. ಮಾಹಿತಿಗೆ ದೂ 080-26623584 ಅಥವಾ ಖುದ್ದಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.