ಬೆಂಗಳೂರು ಗ್ರಾಮಾಂತರ

ಭಾರತ ಸೇವಾದಳದಿಂದ ಸಂತ್ರಸ್ತರಿಗೆ ನಿಧಿ ಸಂಗ್ರಹಣೆ

Published On :

ದೇವನಹಳ್ಳಿ: ಭಾರತ ಸೇವಾದಳ, ಅರುಂಧತಿ ಸೇವಾ ಸಂಸ್ಥೆ, ಲಯನ್ಸ್ ಸಂಸ್ಥೆ, ಜೆಸಿಐ ಸಂಸ್ಥೆ ಹಾಗೂ ಮಹಿಳಾ ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಉತ್ತರಖಾಂಡ ರಾಜ್ಯದಲ್ಲಿ ಪ್ರಳಯರೂಪಿ ಮಳೆಯಿಂದಾಗಿ ಸಾವಿರಾರು ಮಂದಿ ಅಸು ನೀಗಿದ್ದು ಬದುಕಿ ಉಳಿದವರಿಗಾಗಿ ಹಾಗೂ ಆಸ್ತಿ ಪಾಸ್ತಿ ಕಳೆದುಕೊಂಡು ಕೋಟ್ಯಂತರ ರು. ನಷ್ಟವಾಗಿದ್ದು ಇವರ ನೆರವಿಗಾಗಿ ನಿಧಿ ಸಂಗ್ರಹಣೆ ಕಾರ್ಯವನ್ನು ದೇವನಹಳ್ಳಿಯ ಬಜಾರು ರಸ್ತೆಯಲ್ಲಿ ಆರಂಭಿಸಿದರು.
ಈಗಾಗಲೇ ವಿಜಯಪುರ ಪಟ್ಟಣದಲ್ಲಿ ನಿಧಿ ಸಂಗ್ರಹಣೆ ಮಾಡಲಾಗಿದ್ದು ಸುಮಾರು 20 ಸಾವಿರ ರು. ಸಂಗ್ರಹಣೆಯಾಗಿದೆ ಎಂದು ಸೇವಾಧಳ ಅಧ್ಯಕ್ಷರಾದ ಎಸ್.ಲಕ್ಷ್ಮೀನಾರಾಯಣ್ ತಿಳಿಸಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ ಮಾತನಾಡಿ ಸುಮಾರು 50 ಸಾವಿರ ರು.ಗಳಿಗೂ ಹೆಚ್ಚು ಹಣ ಸಂಗ್ರಹ ಮಾಡುವ ಗುರಿ ಇದ್ದು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಎಂದರು.
ಇಲ್ಲಿನ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿನ ವಿದ್ಯಾರ್ಥಿನಿ ಮಾಳಿಗೇನಹಳ್ಳಿ ಅನ್ನಪೂರ್ಣ ಎಂಬ ಬಾಲಕಿ 650 ರು.ಗಳನ್ನು ಸಂಗ್ರಹಿಸಿ ದೇಣಿಗೆ ನೀಡಿದ್ದು ಶಾಲೆಯಿಂದ 1100 ರು.ಗಳನ್ನು ನೀಡಲಾಗುತ್ತಿದೆ ಎಂದು ಶಾಲೆಯ ಶಿಕ್ಷಕಿ ಬೊಮ್ಮಕ್ಕ ತಿಳಿಸಿದರು. ಮೆರವಣಿಗೆಯಲ್ಲಿ ಲಯನ್ಸ್ ಸಂಸ್ಥೆ ಮಾಜಿ ಅಧ್ಯಕ್ಷ ಪಿ.ವಿಜಯಕುಮಾರ್, ಮಹಿಳಾ ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಸೂರ್ಯಕಲಾ ಮೂರ್ತಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.