ಮುಚ್ಚಿರುವ ಕನ್ನಡ ಶಾಲೆಗಳ ಮಾಹಿತಿ ನೀಡಿ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಸರ್ಕಾರ ವಿದ್ಯಾರ್ಥಿಗಳ ಕೊರತೆಯಿಂದ ಕೆಲ ಕನ್ನಡ ಶಾಲೆಗಳನ್ನು ಮುಚ್ಚಿದೆ. ಕಸಾಪ ಈ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದೆ. ಅದೇ ರೀತಿ ಬೆಂ.ಗ್ರಾ.ಜಿಲ್ಲೆಯಲ್ಲಿ ಸಹ ಶಾಲೆಗಳನ್ನು ಮುಚ್ಚಿದ್ದು, ಈ ಬಗ್ಗೆ ವೈಜ್ಞಾನಿಕವಾಗಿ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಕೋ.ಚನ್ನಬಸಪ್ಪ ಅವರ ಆಶಯವಾಗಿರುವುದರಿಂದ ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಮುಚ್ಚಿರುವ ಕನ್ನಡ ಶಾಲೆಗಳ ಮಾಹಿತಿ ಮತ್ತು ಮುಚ್ಚಲು ವೈಜ್ಞಾನಿಕ ಕಾರಣಗಳನ್ನು ಬೆಂ.ಗ್ರಾ.ಜಿಲ್ಲಾ ಕಸಾಪ ಅಧ್ಯಕ್ಷರಿಗೆ ಕಳುಹಿಸಲು ಕೋರಲಾಗಿದೆ.
ಕಾರ್ಯಕಾರಿ ಸಮಿತಿ ಸಭೆ: ಕಸಾಪ 97ನೇ ಮಹಾಧಿವೇಶನ, ಬಸವ ಜಯಂತಿ ಶತಮಾನೋತ್ಸವ, ಕಸಾಪ ಶತಮಾನೋತ್ಸವ, ನಿಬಂಧನೆ ತಿದ್ದುಪಡಿ ಸಂಬಂಧ ಮುಕ್ತ ಚರ್ಚೆಗೆ ಜಿಲ್ಲಾ ಕಾರ್ಯಕಾರಿ ಸಮಿತಿ, ಜಿಲ್ಲೆಯ ಸಾಹಿತ್ಯಾಭಿಮಾನಿಗಳು, ಕನ್ನಡಪರ ಸಂಘಟನೆಗಳ ಅಧ್ಯಕ್ಷರುಗಳ ಸಭೆ ಜು.20ರಂದು ಮ. 3ಕ್ಕೆ ಕೇಂದ್ರ ಕಸಾಪದ ಕುವೆಂಪು ಸಭಾಂಗಣದಲ್ಲಿ ಕರೆಯಲಾಗಿದೆ.
ದತ್ತಿ ಪ್ರಶಸ್ತಿಗೆ ಆಹ್ವಾನ: ಕಸಾಪದಲ್ಲಿರುವ ಶ್ರೀಮತಿ ಗೌರಮ್ಮ ಗಂಗಾಧರಯ್ಯ ಮಕ್ಕಳ ಸಾಹಿತ್ಯ ದತ್ತಿ ಪ್ರಶಸ್ತಿಗೆ 2012-13ನೇ ಸಾಲಿನಲ್ಲಿ ಪ್ರಕಟವಾಗಿರುವ ಡಾ.ಜಚನಿ ಸಮೀಕ್ಷೆ ಮತ್ತು ಸಾಹಿತ್ಯ ಕುರಿತು ಬರೆದ ಕೃತಿಗಳನ್ನು ಆಹ್ವಾನಿಸಿದೆ. ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಗೆ 2012ನೇ ಸಾಲಿನಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಪುಸ್ತಕಗಳನ್ನು ಲೇಖಕರು ಸಲ್ಲಿಸಬಹುದು. ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿಗೆ 2012ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿ ಸಲ್ಲಿಸಬಹುದು. ಆಸಕ್ತರು ಪುಸ್ತಕಗಳ ತಲಾ 3 ಪ್ರತಿಗಳನ್ನು ಬೆಂ.ಗ್ರಾ.ಜಿಲ್ಲಾ ಕಸಾಪ ಕಚೇರಿ, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂ.-18ಗೆ ಕಳುಹಿಸಬಹುದು.
ಕಸಾಪ ಪರೀಕ್ಷೆಗಳು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2013ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿವೆ. ಆಗಸ್ಟ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ದಂಡ ಸಹಿತ ಸೆ.15ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಕಸಾಪ ಜಿಲ್ಲಾ ಕಾರ್ಯದರ್ಶಿಗಳಲ್ಲಿ ಪಡೆಯಬಹುದು.
ಕಿರುಚಿತ್ರ ಬಿಡುಗಡೆ ಇಂದು
ದೊಡ್ಡಬಳ್ಳಾಪುರ: ಬೆಂ.ಗ್ರಾ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ನೇತೃತ್ವದಲ್ಲಿ ಜಿಲ್ಲೆಯ ಶಾಲಾ ಮಕ್ಕಳಲ್ಲಿ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಸಿದ್ಧಪಡಿಸಿರುವ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದ ಉದ್ಘಾಟನೆ ಜು.11ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಶೇ.90ರಷ್ಟು ಖಾಯಿಲೆಗಳು ಕೇವಲ ಬಾಯಿ ಮತ್ತು ಹಲ್ಲಿನ ಅಸ್ವಚ್ಛತೆಯ ಪರಿಣಾಮ ಉಂಟಾಗುತ್ತವೆ. ಈ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಉಪನಿರ್ದೇಶಕರ ಕಚೇರಿ, ಎಂ.ಎಸ್.ರಾಮಯ್ಯ ದಂತ ವೈದ್ಯಕೀಯ ಮಹಾ ವಿದ್ಯಾಲಯ, ಭಾರತೀಯ ಸಾರ್ವಜನಿಕ ದಂತ ಆರೋಗ್ಯ ಸಂಘ, ರಮಣಶ್ರೀ ಪ್ರೀ ಕ್ಲಿನಿಕ್ ಟ್ರಸ್ಟ್ ಸಹಯೋಗದಲ್ಲಿ ದಂತ ಸುರಕ್ಷಾ ಕಿರುಚಿತ್ರ ಮತ್ತು ಕೈಪಿಡಿ ತಯಾರಿಸಲಾಗಿದೆ. ರಾಮಯ್ಯ ಸ್ಮಾರಕ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

