ಬೆಂಗಳೂರು ಗ್ರಾಮಾಂತರ

ಜಾಗ ಖಾಲಿ ಮಾಡಿ ಇಲ್ಲವೇ ಸಮಸ್ಯೆಗೆ ಸ್ಪಂದಿಸಿ: ಶಿವಣ್ಣ

Published On :

ಕನ್ನಡಪ್ರಭ ವಾರ್ತೆ ಆನೇಕಲ್, ಜು.9
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು.ಇಲ್ಲವಾದರೇ ಜಾಗ ಖಾಲಿ ಮಾಡಬೇಕು ಎಂದು ಶಾಸಕ ಬಿ.ಶಿವಣ್ಣ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅವರು ಸೋಮವಾರ ತಾಲೂಕಿನ ಸಮಂದೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆಯನ್ನು ಉದ್ಘಾಟಿಸಿ ಅವರು ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಹಾಗೂ ಸಾರ್ವನಿಕ ಕೆಲಸ ಕಾರ್ಯಗಳಿಗೆ ಅನವಶ್ಯಕವಾಗಿ ವಿಳಂಬ ಮಾಡದೇ ತ್ವರಿತವಾಗಿ ಮಾಡಬೇಕು ಎಂದು ತಿಳಿಸಿದರು.
ಆರು ತಿಂಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ 24ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಶಿಂಷಾ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು. ಸಮಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ ರೆಡ್ಡಿ ಅವರು ಸಮಂದೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳುತಿಲ್ಲ. ಇದರಿಂದಾಗಿ ಹಲವಾರು ಕುಟುಂಬಗಳು ಬೀದಿಪಾಲಾಗುತ್ತಿವೆ.ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಬ್‌ಮಂಗಲ ಕೆಂಪೇಗೌಡ ನಗರಕ್ಕೆ ಸರ್ಕಾರಿ ಆಸ್ಪತ್ರೆ ವ್ಯವಸ್ಥೆ, ಗಡಿಭಾಗದಲ್ಲಿ ಆಗಿಂದಾಗ್ಗೆ ಕಳವು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಚೌಕಿ ಸ್ಥಾಪನೆ, ಕುವೆಂಪುನಗರ, ಮುತ್ತಕಚ್ಚಿ ದಿಣ್ಣೆ,
ಸಬ್‌ಮಂಗಲ, ಚನ್ನೇನಗ್ರಹಾರ, ಎಸ್. ಗಾಂಧಿನಗರ, ಸಮಂದೂರು, ಮಾರನಾಯಕನ ಹಳ್ಳಿ ಮಾರ್ಗವಾಗಿ ಬಸ್ ವ್ಯವಸ್ಥೆ ಮಾಡಬೇಕು ಎಂದರು. ಸಭೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಸಂಘಗಳ ಪದಾಧಿಕಾರಿಗಳು ಪ್ರತಿ ಗ್ರಾಮದಲ್ಲಿ ಸ್ತ್ರೀಶಕ್ತಿ ಗುಂಪುಗಳಿಗೆ ಸಭೆಗಳನ್ನು ನಡೆಸಲು ಸ್ತ್ರೀಶಕ್ತಿ ಭವನಗಳನ್ನು ನಿರ್ಮಿಸಬೇಕು ಎಂದರು.
ವಿಶೇಷ ಕಾರ್ಯಕ್ರಮ : ಗ್ರಾಮಸಭೆಗೂ ಮುನ್ನ ಸಬ್‌ಮಂಗಲ ಪ್ರೌಢಶಾಲೆಯ 150 ವಿದ್ಯಾರ್ಥಿಗಳಿಗೆ ಗಿಡಗಳನ್ನು ನೀಡಿ ಆ ಗಿಡಗಳಿಗೆ ಅವರದೇ ಹೆಸರು ನೀಡಿ ಗಿಡಗಳನ್ನು ಬೆಳೆಸುವ ಜವಾಬ್ದಾರಿ ನೀಡಲಾಗಿದೆ. ಸಬ್‌ಮಂಗಲ ಪ್ರೌಢಶಾಲೆಯ ಆವರಣದಲ್ಲಿ 150 ಗಿಡಗಳನ್ನು ನೆಡಲಾಯಿತು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಕೆಂಪರಾಜು, ಗೆರಟಿಗನಬೆಲೆ ಡಿ.ಮುನಿಯಲ್ಲಪ್ಪ ಮಾತನಾಡಿದರು.   ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಣಾ ನಾರಾಯಣಸ್ವಾಮಿ,ತಾಪಂ ಸದಸ್ಯ ಓಂಕಾರ್, ಕಾರ್ಯ ನಿರ್ವಹಣಾಧಿಕಾರಿ ಡಾ.ಬಿ. ವೀರಭದ್ರಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಷ್ಪರಾಜು, ಬಳ್ಳೂರು ನಾರಾಯಣಸ್ವಾಮಿ, ಜಿ.ಗೋಪಾಲ್ ಮತ್ತು ಕೃಷ್ಣಮೂರ್ತಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.