ಬೆಂಗಳೂರು ಗ್ರಾಮಾಂತರ

ಮಾಳವ ಸಂಜೆ ಪದವಿ ಕಾಲೇಜು ಉದ್ಘಾಟನೆ

Published On :

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಬೋಧಿವೃಕ್ಷ ಎಜುಕೇಶನಲ್ ಟ್ರಸ್ಟ್ ಅಡಿಯಲ್ಲಿ ಮಾಳವ ಸಂಜೆ ಪದವಿ ಕಾಲೇಜು ಕಾರ್ಯಾರಂಭ ಮಾಡಿದೆ.
ಬುಧವಾರ ಸಂಜೆ ನಡೆದ ಸರಳ ಸಮಾರಂಭಕ್ಕೆ ಟ್ರಸ್ಟ್‌ನ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ ಚಾಲನೆ ನೀಡಿದರು. ಅವರು ಮಾತನಾಡಿ, ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಸಂಜೆ ಪದವಿ ಕಾಲೇಜು ಇದಾಗಿದೆ. ಕಾರ್ಖಾನೆಗಳ ಉದ್ಯೋಗಿಗಳು ಮತ್ತು ವಿವಿಧೆಡೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಯುಸಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಮುಂದುವರೆಸಲು, ಶ್ರಮಿಕ ಮತ್ತು ಬಡಜನರಿಗೆ ಅನುಕೂಲವಾಗುವಂತೆ ಕಾಲೇಜು ಆರಂಭಿಸಲಾಗಿದೆ. ಇದನ್ನು ಎಲ್ಲ ವರ್ಗದ ಜನರೂ ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
ಟ್ರಸ್ಟ್‌ನ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಅನುಭವಿ ಮತ್ತು ತಜ್ಞ ಉಪನ್ಯಾಸಕ ವರ್ಗದೊಂದಿಗೆ ಆರಂಭವಾಗುತ್ತಿರುವ ಕಾಲೇಜು ಎಲ್ಲ ರೀತಿಯಲ್ಲೂ ಸುಸಜ್ಜಿತವಾಗಿದೆ. ಉತ್ತಮ ಪಾಠೋಪಕರಣ ಮತ್ತು ಗ್ರಂಥಾಲಯ ಸೇರಿದಂತೆ ಸಾಮಾನ್ಯ ಕಾಲೇಜುಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಲಭಿಸುವ ಎಲ್ಲ ಸವಲತ್ತುಗಳನ್ನೂ ಸಂಜೆ ಕಾಲೇಜಿನಲ್ಲಿ ಒದಗಿಸಲು ಸಂಸ್ಥೆ ಅವಿರತ ಶ್ರಮ ವಹಿಸುತ್ತಿದೆ ಎಂದು ವಿವರಿಸಿದರು.
ಬೆಂಗಳೂರು ವಿಶ್ವವಿದ್ಯಾಲಯ ಪಠ್ಯಕ್ರಮದಂತೆ ತರಗತಿಗಳು ಕಾರ್ಯಾರಂಭ ಮಾಡಿವೆ ಎಂದರು.
ಕಾರ್ಯಕ್ರಮದಲ್ಲಿ ಟ್ರಸ್ಟಿ ರಮೇಶ್, ಪ್ರಾಂಶುಪಾಲ ಪ್ರೊ.ಜಿ.ಕೆ.ಅನಂತಪ್ರಕಾಶ್, ಸಹಪ್ರಾಧ್ಯಾಪಕ ಕೆ.ಆರ್.ರವಿಕಿರಣ್, ಜೆ.ವಿ.ಚಂದ್ರಶೇಖರ್, ಬಿ.ಕೆ. ಮಂಜುನಾಥ್, ಲಕ್ಷ್ಮೀನಾರಾಯಣ್, ಮಂಜುನಾಥ್, ದಕ್ಷಿಣಾಮೂರ್ತಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.