ಬೆಂಗಳೂರು ಗ್ರಾಮಾಂತರ

ಗೋದಾಮು ಕಾಮಗಾರಿಯಲ್ಲಿ ರಾಜಕೀಯ ಬೇಡ'

Published On :

ಮಾಗಡಿ: ರೈತರ ಹಿತದೃಷ್ಟಿಯಿಂದ ಗೋದಾಮು ಕಾಮಗಾರಿ ನಡೆದಿದೆ. ಆದರೂ ಇಲ್ಲಿ ಅಕ್ರಮ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ, ಜನತೆಯನ್ನು ದಾರಿತಪ್ಪಿಸುವ ಕೆಲಸ ಕೆಪಿಸಿಸಿ ಸದಸ್ಯ ಎ.ಮಂಜು  ಮಾಡುತ್ತಿರುವುದು ನಿಜಕ್ಕೂ  ಕೀಳುಮಟ್ಟದ ರಾಜಕೀಯ ಎಂದು ಬಿಡಿಸಿಸಿ ಬ್ಯಾಂಕ್ ಜಿಲ್ಲಾಧ್ಯಕ್ಷ ಎಚ್.ಎನ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಉತ್ತಮವಾದ ಗೋದಾಮು ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಎ.ಮಂಜು ಅವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ, ಅಭಿವೃದ್ಧಿ ವಿಚಾರದಲ್ಲಿ ಸುಮ್ಮನೆ ಆರೋಪ ಮಾಡುವುದನ್ನು ನಿಲ್ಲಿಸಬೇಕು. ಶಾಸಕ ಎಚ್.ಸಿ. ಬಾಲಕೃಷ್ಣ ನಾಲ್ಕು ಬಾರಿ ಶಾಸಕರಾಗಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ದುಡಿದಿದ್ದಾರೆ. ದುಡಿಯುತ್ತಲೂ ಇದ್ದಾರೆ.  ಎಚ್.ಎಂ.ರೇವಣ್ಣ 2 ಬಾರಿ ಮಂತ್ರಿಯಾಗಿದ್ದು, ಶಾಸಕರು ಕೈಗೊಳ್ಳುವ  ಅಭಿವೃದ್ಧಿ ವಿಚಾರದಲ್ಲಿ ಎಂದೂ ಮೂಗು ತೂರಿಸಿ ಆರೋಪ ಮಾಡಿದವರಲ್ಲ, ಜನತೆಯ ಋಣ ಎಚ್.ಎಂ. ರೇವಣ್ಣ ಅವರ ಮೇಲೂ ಇದೆ. ರೇವಣ್ಣ ಮಾರ್ಗದರ್ಶನದಲ್ಲಿ ಬೆಳೆಯುತ್ತಿರುವ ನೀವು ಕೀಳುಮಟ್ಟದ ರಾಜಕೀಯ ಮಾಡದೆ ಅಭಿವೃದ್ಧಿ ವಿಚಾರದಲ್ಲಿ ಸ್ಪಂದಿಸುವಂತಹ ಗುಣವನ್ನು ಬೆಳಸಿಕೊಳ್ಳುವುದು  ಸೂಕ್ತ ಎಂದು ಅಶೋಕ್ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.