ಜಾತಿ, ಭಾಷೆ ಹೆಸರಿನಲ್ಲಿ ಕಚ್ಚಾಟ ಬೇಡ
ಕ.ಪ್ರ.ವಾರ್ತೆ ರಾಮನಗರ ಜು.13
ಜಾತಿ, ಭಾಷೆ ಹೆಸರಿನಲ್ಲಿ ಕಚ್ಚಾಟ ನಡೆಸುವುದನ್ನು ಬಿಟ್ಟು, ದೇಶವನ್ನು ಕಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮುಂದಾಗಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಕರೆ ನೀಡಿದ್ದಾರೆ.
ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂದಿರದಲ್ಲಿ ರಾಮನಗರ ರೋಟರಿ ಸಂಸ್ಥೆ ಆಯೋಜಿಸಿದ್ದ 2013-14ನೇ ಸಾಲಿನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಆರೋಗ್ಯ, ಶಿಕ್ಷಣದ ಪ್ರಗತಿ ಮತ್ತು ಮೂಲಭೂತ ಸಮಸ್ಯೆ ನಿವಾರಣೆ ಅತ್ಯಂತ ಪ್ರಮುಖವಾದುದಾಗಿದೆ ಎಂದರು. ಪೊಲಿಯೋ, ಏಡ್ಸ್ನಂತಹ ಮಾರಕ ರೋಗಗಳು ನಾಗರಿಕ ಸಮಾಜವನ್ನು ಕಾಡುತ್ತಿವೆ. ಇಂತಹ ಸಮಸ್ಯೆಗಳನ್ನು ತೊಡೆದುಹಾಕಲು ಸಾಮಾಜಿಕ ಕ್ಷೇತ್ರದಲ್ಲಿ ಪರೋಪಕಾರಿ ಮನೋಭಾವದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಮೃದ್ಧ ಮತ್ತು ಸದೃಢ ಕರ್ನಾಟಕ ನಿರ್ಮಾಣಕ್ಕೆ ಪ್ರಗತಿಪರ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ.
ಸಮಾಜದ ಅಭಿವೃದ್ಧಿಗೆ ಮಾರಕವಾಗಿರುವ ಮೂಢನಂಬಿಕೆಗಳನ್ನು ಮುಗ್ಧ ಜನರ ಮನಸ್ಸಿನಿಂದ ದೂರಸರಿಸಿ, ಅವರಲ್ಲಿ ನೈತಿಕತೆಯ ಅರಿವು ಮೂಡಿಸಬೇಕಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

