ಬೆಂಗಳೂರು ಗ್ರಾಮಾಂತರ

ಆರ್.ಕೆ. ಬೈರಲಿಂಗಯ್ಯ, ದೇವರಾಜು ನಾಮಪತ್ರ ಸಲ್ಲಿಕೆ

Published On :

ಕ.ಪ್ರ.ವಾರ್ತೆ ರಾಮನಗರ  ಜು.13
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಜು.22 ರಂದು ನಡೆಯಲಿರುವ ಚುನಾವಣೆಗೆ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಆರ್.ಕೆ. ಬೈರಲಿಂಗಯ್ಯ ಮತ್ತು ಮಾಯಾಗಾನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ಎನ್.ದೇವರಾಜು ಪ್ರೌಢಶಾಲಾ ಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಆರ್.ಕೆ.ಬೈರಲಿಂಗಯ್ಯ ಮತ್ತು ಎಂ.ಎನ್.ದೇವರಾಜು ಅವರ ನಿರಂತರ ಸೇವೆ, ಕ್ರಿಯಾಶೀಲತೆ ಮತ್ತು ಕಾರ್ಯದಕ್ಷತೆಯನ್ನು ಪರಿಗಣಿಸಿ ಜಿಲ್ಲಾ ಮತ್ತು ತಾಲೂಕು ಪ್ರೌಢ ಶಾಲಾ ಸಹಶಿಕ್ಷಕರ ಸಂಘದಿಂದ ಬೆಂಬಲಿಸಲು ತೀರ್ಮಾನಿಸಲಾಗಿದ್ದು, ಸುಮಾರು 60 ಶಿಕ್ಷಕರ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಘಟನೆ ಹಿತದೃಷ್ಟಿಯಿಂದ ಪ್ರೌಢ ಶಿಕ್ಷಣ ಇಲಾಖೆ ಎಲ್ಲಾ ನೌಕರರು ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು ಘಟಕದ ಅಧ್ಯಕ್ಷ ಬಿ.ಜಿ.ಪುಟ್ಟಸ್ವಾಮಿ ಹಾಗೂ ಕಾರ್ಯದರ್ಶಿ ಜಿ.ಶಿವಶಂಕರ್ ಮನವಿ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಂಘದ ರಾಜ್ಯ ಉಪಾಧ್ಯಕ್ಷ ಟಿಸಿಕೆ ರಾಜು, ತಾಲೂಕು ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಕೃಪಾಚಂದ್ರ, ಕ್ರೀಡಾ ಕಾರ್ಯದರ್ಶಿ ನೀಲಕಂಠಸ್ವಾಮಿ, ಶಿವಕುಮಾರ್‌ಮಯರ್, ಸಹಕಾರ್ಯದರ್ಶಿ ಸಿದ್ದರಾಮ ಬಿರಾದಾರ್, ಎಲ್.ಸಿ.ಮಹಾದೇವಯ್ಯ, ಪ್ರಭುಸ್ವಾಮಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.