ಬೆಂಗಳೂರು ಗ್ರಾಮಾಂತರ

'ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಲಿ'

Published On :

ಕ.ಪ್ರ.ವಾರ್ತೆ  ನೆಲಮಂಗಲ ಜು. 14
ಕ್ಷೇತ್ರದಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಸೇರಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಕಾರ್ಯಕರ್ತರಿಗೆ ತಿಳಿಸಿದರು.
ಅವರು ಭಾನುವಾರ ಪಟ್ಟಣದ  ಪ್ರವಾಸಿ ಮಂದಿರದಲ್ಲಿ ಕಾಂಗ್ರೇಸ್ ಕಾರ್ಯಕರ್ತರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪರ್ತಕರ್ತರೊಂದಿಗೆ ಮಾತನಾಡಿದರು. ಕ್ಷೇತ್ರದಲ್ಲಿನ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುವಂತೆ ಜನ ಮನವಿ ನೀಡಿದ್ದಾರೆ. ಅವರ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದ ಅವರು ತಾಲೂಕು ತಿಗಳರ ಸಂಘಕ್ಕೆ ಸಮುದಾಯ ಭವನ ಮಂಜೂರಾತಿ, ಸ್ಥಳೀಯ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ಇಲ್ಲದೆ ಇರುವುದರಿಂದ ಅತಿ ಶೀಘ್ರವಾಗಿ ಸ್ಥಳಾನುಕೂಲ ಕಲ್ಪಿಸಲಾಗುವುದು ಎಂದರು.
ಪಕ್ಷದ ಕಾರ್ಯಕರ್ತರು ಯಾವುದೇ ಗೊಂದಲವನ್ನು ಮಾಡಿಕೊಳ್ಳಬಾರದು. ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಪಕ್ಷದ ವೇದಿಕೆಯಲ್ಲಿ ಪರಸ್ಪರ ಚರ್ಚಿಸಿ ಭಿನ್ನಾಭಿಪ್ರಾಯ ನಿವಾರಿಸಿಕೊಳ್ಳಬೇಕು ಎಂದರು.
ಅವಶ್ಯಕತೆ ಇದ್ದರೆ ಅಂತಹ ವೇದಿಕೆಗೆ ನಾನು ಖುದ್ದಾಗಿ ಹಾಜರಾಗುತ್ತೇನೆ. ಅಲ್ಲಿ ಕುಳಿತು ಎಲ್ಲರ ಅಭಿಪ್ರಾಯ ಪಡೆದು ಸರ್ವರ ಒಮ್ಮತದ ಅಭಿಪ್ರಾಯದಂತೆ ಸೂಕ್ತ ತೀರ್ಮಾನ ತೆಗೆದುಕೊಳ್ಳೋಣ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.