ಸದಾಶಿವ ಆಯೋಗದಂತೆ ಮೀಸಲಾತಿ ವರ್ಗೀಕರಣ ಆಗಲಿ
ವಿಜಯಪುರ: ಮಾದಿಗ ಸಮಾಜ ಇಂದಿಗೂ ಸಾಕಷ್ಟು ಹಿಂದೆ ಉಳಿದಿದ್ದು ಅಭಿವೃದ್ಧಿ ಹೊಂದಬೇಕಾದರೆ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ತಾಲೂಕು ಮಾದಿಗ ದಂಡೋರದ ಅಧ್ಯಕ್ಷ ಮಾರಪ್ಪ ಅಭಿಪ್ರಾಯಪಟ್ಟರು. ಅವರು ಇಲ್ಲಿನ ದುರ್ಗಾ ತಾಯಿ ಕಾಲೋನಿಯ ಅಂಬೇಡ್ಕರ್ ಭವನದಲ್ಲಿ ಮಾದಿಗ ದಂಡೋರದ ಟೌನ್ ಘಟಕವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪುರಸಭೆಯ ಸದಸ್ಯ ನಾಗರಾಜ್ ಮಾತನಾಡುತ್ತಾ ಈ ನೂತನ ದಂಡೋರ ಘಟಕದ ಕಾರ್ಯವೈಖಾರಿ ನಿಸ್ವಾರ್ಥತೆಯಿಂದ ಇರುವುದರೊಂದಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಸಮುದಾಯಕ್ಕೆ ಮುಟ್ಟುವಂತೆ ಮಾಡಬೇಕು ಎಂದರು. ಇದೇ ಸಂದರ್ಭದಲ್ಲಿ ಸದಾಶಿವ ಆಯೋಗದ ವರದಿಯಂತೆ ಮೀಸಲಾತಿ ವರ್ಗಿಕರಣ ಜಾರಿಯಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು.ಪುರಸಭಾ ಸದಸ್ಯರಾದ ಅರುಣತಿರುಮಲೇಶ್ ಹಾಗೂ ಎಂ.ನಾಗರಾಜ್ ಅವರನ್ನು ತಾಲೂಕು ದಂಡೋರ ಸಮಿತಿಯಿಂದ ಸನ್ಮಾನಿಸಲಾಯಿತು. ತಾಲೂಕು ಪ್ರಧಾನ ಕಾರ್ಯದರ್ಶಿ ಮುನಿರಾಜು, ಹೋಬಳಿ ಅಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾ ಸದಸ್ಯ ಗೋಪಾಲಸ್ವಾಮಿ, ಕಾಂಗ್ರೆಸ್ ಮುಖಂಡ ತಿರುಮಲೇಶ್, ಗಂಗರೆಡ್ಡಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

