ಬೆಂಗಳೂರು ಗ್ರಾಮಾಂತರ

ಜಿಲ್ಲೆಯ ನಾನಾ ಗ್ರಾಪಂ ಸದಸ್ಯ ಸ್ಥಾನಗಳಿಗೆ ಆ.4 ರಂದು ಚುನಾವಣೆ

Published On :

ಕ.ಪ್ರ.ವಾರ್ತೆ  ರಾಮನಗರ  ಜು. 16
ರಾಜಿನಾಮೆ, ನಿಧನ ಸಹಿತ ವಿವಿಧ ಕಾರಣಕ್ಕೆ ತೆರವಾಗಿರುವ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಆ.4ಕ್ಕೆ ಚುನಾವಣೆ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ರಾಮನಗರ ತಾಲೂಕಿನ 5, ಚನ್ನಪಟ್ಟಣ ತಾಲೂಕಿನ 4, ಕನಕಪುರ ತಾಲೂಕಿನ 3 ಹಾಗೂ ಮಾಗಡಿ ತಾಲೂಕಿನ 1 ಸ್ಥಾನ ಸೇರಿದಂತೆ ಒಟ್ಟಾರೆ 13 ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಳೆ(ಜು.17) ಅಧಿಸೂಚನೆ ಹೊರ ಬೀಳಲಿದೆ.
17ರಿಂದಲೇ ನಾಮಪತ್ರ: ನಾಮಪತ್ರಗಳ ಸಲ್ಲಿಕೆ ಜು.17ರಿಂದಲೇ ಪ್ರಾರಂಭವಾಗಲಿದ್ದು, ಜು.24 ಕಡೆಯ ದಿನವಾಗಿದೆ. ಜು.25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂತೆಗೆತಕ್ಕೆ 27 ಕಡೆಯ ದಿನ. ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.  
ಆ.4 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಆ.6ರಂದು ಆಯಾ ತಾಲೂಕು ಕೇಂದ್ರದಲ್ಲಿ ಮತಗಳ ಎಣಿಕೆ ನಡೆಸಿದ ಬಳಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.  
ಸ್ಥಾನಗಳ ವಿವರ: ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ, ಮಳೂರು, ಸಿಂಗರಾಜಪುರ, ವಂದಾರಗುಪ್ಪೆ,  ಕನಕಪುರ ತಾಲೂಕಿನ ಹೊನ್ನಗನಹಳ್ಳಿ, ದೊಡ್ಡಮರಳವಾಡಿ, ಮುಳಹಳ್ಳಿ, ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ. ರಾಮನಗರ ತಾಲೂಕಿನ ಸುಗ್ಗನಹಳ್ಳಿ, ಜಾಲಮಂಗಲ, ದೊಡ್ಡಗಂಗವಾಡಿ. ಕೂಟಗಲ್, ಬಿಡದಿ ಗ್ರಾ.ಪಂ.ನ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ನೀತಿ ಸಂಹಿತೆ ಜಾರಿ: ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜು.17ರಿಂದ ಆ.7ರವರೆಗೆ ಮಾದರಿ ನೀತಿ ಜಾರಿಯಲ್ಲಿರುತ್ತದೆ.  ಇದು ಬರ ಪರಿಹಾರ ಕಾಮಗಾರಿ, ಪ್ರವಾಹ ಇತ್ಯಾದಿ ಪ್ರಕೃತಿ ವಿಕೋಪಗಳಿಗೆ ಅನ್ವಯವಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಮತದಾರರ ಪಟ್ಟಿ: ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಈ ಗ್ರಾ.ಪಂ. ಸದಸ್ಯ ಸ್ಥಾನಗಳ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ವೀರಭದ್ರಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.