ಕ್ರಿಯಾಶೀಲ ಶಿಕ್ಷಕನಿಂದ ಸಾಮಾಜಿಕ ಬದಲಾವಣೆ ಸಾಧ್ಯ
ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ಜು. 16
ಇಲ್ಲಿನ ಸ್ವಾಮಿ ವಿವೇಕಾನಂದ ಕನ್ನಡ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಗರ ಕ್ಲಸ್ಟರ್ ಮಟ್ಟದ ಶೈಕ್ಷಣಿಕ ಸಮಾವೇಶ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಎಂಎಬಿಎಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಗುರುದೇವ್ ಉದ್ಘಾಟಿಸಿದರು. ಅವರು ಮಾತನಾಡಿ, ಕ್ರಿಯಾಶೀಲ ಶಿಕ್ಷಕನಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ. ಶಿಕ್ಷಕರು ಸಾಮಾಜಿಕ ಪರಿಸ್ಥಿತಿಗಳ ಅವಲೋಕನದೊಂದಿಗೆ ಸಕಾರಾತ್ಮಕ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು.
ಆಗ ಮಾತ್ರ ವಿದ್ಯಾರ್ಥಿಗಳನ್ನು ಅದನ್ನು ವ್ಯವಸ್ಥಿತವಾಗಿ ಸ್ವೀಕರಿಸಿ ಬೆಳೆಯುವ ಅವಕಾಶಗಳು ಲಭ್ಯವಾಗುತ್ತವೆ. ಸ್ಪರ್ಧಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ರೂಢಿಸಬೇಕಾದರೆ ಕ್ರಿಯಾಶೀಲ ಶಿಕ್ಷಕನಿಂದ ಮಾತ್ರ ಸಾಧ್ಯ ಎಂದರು.
ಶಿಕ್ಷಕರು ಜಾಗೃತ ಮನಸ್ಸಿನ ಸಂಕೇತವಾಗಬೇಕು. ಸ್ಥಿರ-ಚರ ಆಸ್ತಿಗಳ ಸಂಪಾದನೆಗಿಂತ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡುವುದು ಇಂದಿನ ಸಂದರ್ಭದಲ್ಲಿ ಅನಿವಾರ್ಯ ಮತ್ತು ಮಹತ್ವದ ಕೆಲಸ ಎಂದು ಅವರು ಅಭಿಪ್ರಾಯಪಟ್ಟರು.
ಬೆಂ.ಗ್ರಾ.ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ತರಬೇತಿ ಶಿಕ್ಷಣ ಪ್ರಗತಿಗೆ ಪೂರಕವಾಗಿರಬೇಕು.
ಮಕ್ಕಳ ಸರ್ವಾಂಗೀಣ ಪ್ರಗತಿ ಮತ್ತು ಬೆಳವಣಿಗೆಗೆ ಪ್ರಾಥಮಿಕ ಹಂತದಲ್ಲೇ ಹೆಚ್ಚಿನ ಪರಿಶ್ರಮ ಮುಖ್ಯ. ಮಾನವೀಯ ಮೌಲ್ಯಗಳು ಶಿಕ್ಷಣದ ಅಂಗವಾದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ಶಿಕ್ಷಣ ಸಂಯೋಜಕಿ ಎಂ.ಕೋಮಲ ಶೈಕ್ಷಣಿಕ ಸಮಾವೇಶದ ಮೂಲ ಆಶಯಗಳನ್ನು ಸಮಾವೇಶದಲ್ಲಿ ಭಾಗವಹಿಸಿದ್ದ ಶಿಕ್ಷಕರಿಗೆ ವಿಶ್ಲೇಷಿಸಿ ಹೇಳಿದರು. ಕ್ಲಸ್ಟರ್ ಸಂಯೋಜಕ ದೇವರಾಜ್ ಮತ್ತಿತರರು ಭಾಗವಹಿಸಿದ್ದ ಶಿಬಿರದಲ್ಲಿ 60ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

