ಪೌಲ್ಟ್ರಿ ಫಾರಂ ಸೃಷ್ಟಿಸಿದ ಅನೈರ್ಮಲ್ಯ ವಿರುದ್ಧ ಧರಣಿ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಮೇಶ್ವರ ಗ್ರಾಮದಲ್ಲಿ ತಲೆ ಎತ್ತಿರುವ ಕೋಮರ್ಲ ಪೌಲ್ಟ್ರಿ ಫಾರಂ ಅನೈರ್ಮಲ್ಯ ಸೃಷ್ಟಿಸುತ್ತಿರುವ ಪರಿಣಾಮ ಸುತ್ತಮುತ್ತಲ ಜನರಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿ ಇಲ್ಲಿನ ಕನ್ನಡ ಕ್ರಾಂತಿ ದೀಪ ಸಂಘಟನೆಯ ನೇತೃತ್ವದಲ್ಲಿ ಕೋಮರ್ಲ ಗ್ರೂಪ್ ಆಫ್ ಕಂಪನಿಸ್ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಈ ಪೌಲ್ಟ್ರಿ ಫಾರಂನಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ನೊಣಗಳ ಕಾಟ ಹೆಚ್ಚಿದೆ. ಜೊತೆಗೆ ಬೀದಿ ನಾಯಿಗಳ ಹಾವಳಿ ಬಿಗಡಾಯಿಸಿದೆ. ಅಲ್ಲದೆ ನೈರ್ಮಲ್ಯದ ಸಮಸ್ಯೆ ಎದುರಾಗಿದೆ ಎಂದು ಆರೋಪಿಸಿದರು.
ತಾಲೂಕಿನಲ್ಲಿ ಇತ್ತೀಚೆಗೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಜನ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಹೀಗಾಗಿ ಈ ಕಂಪನಿಯನ್ನು ತಾಲೂಕು ಮತ್ತು ಹಾದ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಹೊರಗಿಡಬೇಕು. ಈ ಹಂತದಲ್ಲಿ ಆರೋಗ್ಯಾಧಿಕಾರಿಗಳು, ತಹಸೀಲ್ದಾರರಿಗೆ ಲಿಖಿತ ದೂರು ನೀಡಲಾಗಿದೆ. ಆದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಶಾಸಕರು ಇತ್ತ ಗಮನ ಹರಿಸಬೇಕು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ತೀವ್ರ ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆ ಸ್ಪಂದಿಸಿ ಹೇಳಿಕೆ ನೀಡಿರುವ ಕಂಪನಿ ಆಡಳಿತ ವರ್ಗ ಕೂಡಲೇ ನೈರ್ಮಲ್ಯ ಸುಧಾರಣೆಗೆ ಗಮನ ಹರಿಸಲಾಗುವುದು. ಯಾವುದೇ ಗ್ರಾಮ ಅಥವಾ ಸಾರ್ವಜನಿಕರಿಗೆ ತೊಂದರೆಯಾಗದಂತೆ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿ ಪೌಲ್ಟ್ರಿ ನಡೆಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಹನುಮಂತರಾಯಪ್ಪ, ಚನ್ನಿಗರಾಮಯ್ಯ, ಗಂಗಮ್ಮ, ಲಕ್ಷ್ಮಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

