ಸೋಮೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಅಲಂಕಾರ ಗಿಡ
ಮಾಗಡಿ: ಶ್ರೀಸೋಮೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಅಲಂಕಾರ ಗಿಡಗಳನ್ನು ನೆಡುವ ಮೂಲಕ ಆವರಣದ ಪರಿಸರವನ್ನು ಸುಂದರವನ್ನಾಗಿಸಲಾಗುವುದು ಎಂದು ಬೆಂಗಳೂರಿನ ಪದ್ಮನಾಭನಗರದ ಲಯನ್ಸ್ ಕ್ಲ್ಲಬ್ ಅಧ್ಯಕ್ಷೆ ಭಾರತಿ ಕೃಷ್ಣಪ್ಪ ನುಡಿದರು.
ಅವರು ಮಾಗಡಿ ತಾಲೂಕಿನ ಪ್ರಸಿದ್ಧ ಶ್ರೀಸೋಮೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಲಂಕಾರದ ಗಿಡಗಳನ್ನು ನೆಟ್ಟು ನೀರುಣಿಸಿದರು. ನಂತರ ಮಾತನಾಡಿ ದೇವಾಲಯಗಳು ಮಾನಸಿಕವಾಗಿ ಶಾಂತಿ ನೆಮ್ಮದಿಯ ತಾಣಗಳಾಗಿವೆ. ಆಲಯದ ಆವರಣ ಮನೋಲ್ಲಾಸಕ್ಕೆ ಸುಂದರ ಪರಿಸರವಾಗಬೇಕು. ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದ್ದೇವೆ ಎಂದು ವಿವರಿಸಿದರು.
ತೋಟಗಾರಿಕೆ ಜಂಟೀ ನಿರ್ದೇಶಕ ಬೆಳ್ಳೂರು ಕೃಷ್ಣ ಮಾತನಾಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ತೋಟಗಾರಿಕೆ ಸಸಿಗಳನ್ನು ಬೆಳೆಸಲಾಗಿದೆ. ಆಸ್ತಕರಿಗೆ ಮತ್ತು ರೈತರಿಗೆ ತೆಂಗು, ಮಾವು, ಸಪೋಟ ಗಿಡಗಳನ್ನು ವಿತರಿಸಲು ಅಗತ್ಯ ಕ್ರಮ ವಹಿಸಿದ್ದೇನೆ. ಸಂಘ, ಸಂಸ್ಥೆಗಳು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿವೆ. ಅಂತಹ ಸಂಸ್ಥೆಗಳಿಗೆ ಇಲಾಖೆ ವತಿಯಿಂದ ಅಲಂಕಾರ ಗಿಡಗಳನ್ನು ವಿತರಿಸಲಾಗಿದೆ ಎಂದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಮಮತ ಸುಂದರರಾಜು, ಶಾಮಲಗೌಡ, ಮಾಸ್ಟರ್ಯುವಶಕ್ತಿ ಯೂತ್ ಕ್ಲಬ್ನ ಅಧ್ಯಕ್ಷ ಹೇಮಂತ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

