ಬಹುಕೋಟಿ ಲೂಟಿಕೋರರನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ರಾಮನಗರ ಜು. 17
ರಾ-ಚ ಅಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಲೂಟಿಕೋರರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ವೇಳೆ ಪ್ರಾಧಿಕಾರದ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ ಸೇರಿದಂತೆ 10 ಮಂದಿಯನ್ನು ಬಂಧಿಸಿ, ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಾಧಿಕಾರದ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ರಮೇಶಗೌಡ ಮತ್ತು ಕಾರ್ಯಕರ್ತರು ದಿಢೀರ್ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಆಕ್ರೋಶ ವ್ಯಕ್ತಪಡಿಸಿದರು. ಆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಸಾರ್ವಜನಿಕರ ಹಣ ಲೂಟಿ ಮಾಡಿದವರನ್ನು ತಕ್ಷಣ ಬಂಧಿಸಬೇಕು. ಪ್ರಾಧಿಕಾರದ ಖಾತೆಯಿಂದ ಹಣ ಯಾರ ಖಾತೆಗೆ ಹೋಗಿದೆ ಎನ್ನುವುದನ್ನು ಬಹಿರಂಗಪಡಿಸಬೇಕು. ಪ್ರಕರಣದ ಸಮಗ್ರ ತನಿಖೆ ನಡೆಸಿ, ಎಲ್ಲ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನ್ಯಾಯಾಂಗ ವಶಕ್ಕೆ: ರಮೇಶಗೌಡ ಸೇರಿದಂತೆ 10 ಮಂದಿಯನ್ನು ಬಂಧಿಸಿದ ಪೊಲೀಸರು ಅವರ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ, ಸರ್ಕಾರಿ ಕಚೇರಿಗೆ ಅಕ್ರಮ ಪ್ರವೇಶ, ಕರ್ತವ್ಯಕ್ಕೆ ಅಡ್ಡಿ, ಶಾಂತಿ ಭಂಗ ಸಹಿತ ವಿವಿಧ ಪ್ರಕರಣಗಳನ್ನು ದಾಖಲಿಸಿದರು. ಬಳಿಕ ಬಂಧಿತರನ್ನು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು. ಬಳಿಕ ಬಂಧಿತರನ್ನು ರಾಮನಗರ ಕಾರಾಗೃಹಕ್ಕೆ ಬಿಡಲಾಗಿದೆ. ಬಂಧಿತರಲ್ಲಿ ಯೋಗೇಶ್, ಶ್ರೀಧರ್, ಕೃಷ್ಣ, ರಂಜಿತ್ ಮತ್ತಿತರರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

