ಬೆಂಗಳೂರು ಗ್ರಾಮಾಂತರ

ಐಟಿ ದಾಳಿಗೆ ಖಂಡನೆ

Published On :

ದೊಡ್ಡಬಳ್ಳಾಪುರ: ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದು ಖಂಡನೀಯ. ಇದು ಒಂದು ವರ್ಗವನ್ನು ಗುರಿಯಾಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸಿರುವ ರಾಜಕೀಯ ಪಿತೂರಿ ಎಂದು ರಾಜ್ಯ ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷ, ಒಕ್ಕಲಿಗ ಮುಖಂಡ ಕೆ.ಎಂ.ಹನುಮಂತರಾಯಪ್ಪ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದು ಜಾತಿ-ಸಮುದಾಯದ ಆಸ್ತಿಯ ಮೇಲೆ ಏಕಾಏಕಿ ಈ ರೀತಿಯಾದ ದಾಳಿ ನಡೆಸುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಜಾತ್ಯಾತೀತ ಮೌಲ್ಯಗಳ ಬಗ್ಗೆ ಉಪದೇಶ ನೀಡುವ ಈ ಜನ ಜಾತೀಯ ಸಂಸ್ಥೆಗಳನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕೇ ವಿನಃ ಈ ರೀತಿಯಾಗಿ ಅಲ್ಲ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.