21ರಂದು ಪ್ರತಿಭಾ ಪುರಸ್ಕಾರ
ನೆಲಮಂಗಲ: ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ರುದ್ರೇಶ್ವರ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ವತಿಯಿಂದ 2013ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವೀರಶೈವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜು. 21ರ ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ರುದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಮೇಲಣಗವಿ ಮಠದ ಮಲಯಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮಿ ವಹಿಸಲಿದ್ದಾರೆ. ಗದ್ದುಗೆ ಮಠದ ಮಹಂತ ಸ್ವಾಮಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಹೊನ್ನಮ್ಮಗವಿ ಸಂಸ್ಥಾನ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮಿ, ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮಿ, ಪವಾಡ ಬಸವಣ್ಣದೇವರ ಮಠದ ಸಿದ್ದಲಿಂಗ ಸ್ವಾಮೀಜಿ ಭಾಗವಹಿಸುವರು. ಅ.ಭಾ.ವೀ.ಮ.ಸಭಾ ಅಧ್ಯಕ್ಷ ಎನ್.ಎಸ್. ನಟರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಅಣ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 3ರಿಂದ ಜ್ಞಾನ- ವಿಜ್ಞಾನ ಸಮಿತಿ ಸಮಾವೇಶ
ನೆಲಮಂಗಲ: ಕರ್ನಾಟಕ ಜ್ಞಾನ- ವಿಜ್ಞಾನ ಸಮಿತಿ ತಾಲೂಕು ಘಟಕದಿಂದ ರಾಜ್ಯ ಸಮಾವೇಶವನ್ನು ಆ. 3 ಮತ್ತು 4 ರಂದು ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆಯ ರಾಜ್ಯ ಹೊಯ್ಸಳ ಸೇನೆ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಹೊನ್ನಮ್ಮಗವಿ ಮಠದ ಪ್ರಾರ್ಥನಾ ಮಂದಿರದಲ್ಲಿ ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ಪೂರ್ವಭಾವಿ ಸೋಂಪುರ ಸರ್ಕಾರಿ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ಇ.ಬಸವರಾಜು ಅಧ್ಯಕ್ಷತೆ ವಹಿಸಿ ಕೆಲವು ತೀರ್ಮಾನ ಕೈಗೊಂಡರು. ರಾಜ್ಯ ಸಮಾವೇಶಕ್ಕೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ, ಸಾಹಿತಿ ಬರಗೂರು ರಾಮಚಂದ್ರಪ್ಪ, ರಾಜ್ಯ ಹೊಯ್ಸಳ ಸೇನೆಯ ರಾಜ್ಯಾಧ್ಯಕ್ಷರು ಮತ್ತು ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದು ತೀರ್ಮಾನಿಸಲಾಯಿತು. ತಾಲೂಕು ಸಂಘದ ಎ.ಎಚ್. ಬಸವರಾಜಯ್ಯ, ರಾಜ್ಯ ಸಮಿತಿ ಸದಸ್ಯ ಹೊನ್ನಶಾಮಯ್ಯ, ತುಮಕೂರಿನ ಶಿವಕುಮಾರಸ್ವಾಮಿ, ರವಿಕುಮಾರ್, ಕಾರ್ಯದರ್ಶಿ ದೇವರಾಜು, ಖಜಾಂಚಿ ನಾಗೇಶ್, ಎನ್.ಬಿ.ಸರೋಜಮ್ಮ, ಬಿ.ಶೈಲಜ, ಮಂಗಳ, ಇಂದ್ರಾಣಿ, ರುದ್ರೇಶಯ್ಯ, ಮಹದೇವಯ್ಯ, ರಾಜಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

