ದಲಿತರ ಒಗ್ಗಟ್ಟಿನ ಕೊರತೆ: ರಾಜಕಾರಣಿಗಳ ಬಂಡವಾಳ
ರಾಮನಗರ: ದಲಿತ ಸಮುದಾಯದ ಒಗ್ಗಟ್ಟಿನ ಕೊರತೆಯನ್ನೇ ಬಂಡವಾಳವನ್ನಾಗಿಸಿಕೊಂಡಿರುವ ರಾಜಕೀಯ ಪಕ್ಷಗಳು ದಲಿತರನ್ನು ಮತ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ ಎಂದು ಪರಿವರ್ತನ ಪತ್ರಿಕೆ ಸಂಪಾದಕ ಕೃಷ್ಣಮೂರ್ತಿ ಚಮರಂ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಜಯಪುರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರಜಾಸೇವಾ ಸಮಿತಿ, ಸಿದ್ದಾರ್ಥ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 122ನೇ ಜಯಂತ್ಯುತ್ಸವ ಹಾಗೂ ರಾಜ್ಯಮಟ್ಟದ ಜಾನಪದ ಕಲಾಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಮ್ಮ ಮತಗಳು ದೇಶ ಕಟ್ಟುವ ಸಲುವಾಗಿ ಇರುವುದೇ ಹೊರತು ಮಾರಾಟಕ್ಕಲ್ಲ ಎಂದು ದಲಿತರು ಅರಿತುಕೊಳ್ಳಬೇಕು. ಹಣ, ಮದ್ಯ, ಸೀರೆ, ಮೂಗುತಿಗಾಗಿ ತಮ್ಮ ಹಕ್ಕನ್ನು ಮಾರಿಕೊಳ್ಳುವುದು ಸರಿಯಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ದಲಿತ ಮತಗಳು ಮಾರಾಟದ ಸರಕಲ್ಲ ಎಂಬುದನ್ನು ನಿರೂಪಿಸಬೇಕು ಎಂದರು.
ಅಂಬೇಡ್ಕರ್ ಅವರು ಎಲ್ಲಾ ಜಾತಿಯ ಶೋಷಿತರ ಪರವಾಗಿ, ಅಸ್ಪೃಶ್ಯತೆ, ಅಸಮಾನತೆ, ಮೂಢನಂಬಿಕೆ ವಿರುದ್ಧ ಹೋರಾಡಿ ಶೋಷಿತರಲ್ಲಿ ಜಾಗೃತಿ ಮೂಡಿಸಿ ಆತ್ಮಾಭಿಮಾನ ಬೆಳೆಸಿದರು. ಆದರೆ, ಇಂದು ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಲಾಗಿದೆ ಎಂದು ವಿಷಾದಿಸಿದರು.
ಶೋಷಿತ ಸಮುದಾಯ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಎಲ್ಲರಂತೆ ಮುಂದೆ ಬರಬೇಕು ಎಂಬುದು ಅಂಬೇಡ್ಕರ್ ಅವರ ಕನಸಾಗಿತ್ತು. ಅವರು ಪ್ರತಿಪಾದಿಸಿದ ಸಮಾಜಮುಖಿ ಮೌಲ್ಯ ಅಳವಡಿಸಿಕೊಳ್ಳಲು ಸಂಕಲ್ಪ ಮಾಡಿದಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಡಿಎಸ್ಎಸ್ ಜಿಲ್ಲಾ ಸಂಚಾಲಕ ರಾ.ಶಿ.ದೇವರಾಜು ತಿಳಿಸಿದರು.
ಕೆ.ಅಶೋಕ್, ಗೋವಿಂದರಾಜು, ಗೋವಿಂದಯ್ಯ, ಚೆಲುವರಾಜು, ವಿ.ಮೋಹನ್ಕುಮಾರ್, ಕೆ.ವಿ. ಶಿವಣ್ಣ, ನಟರಾಜು, ಅನಂತು, ನಾರಾಯಣ್, ಲೋಕೇಶ್, ಟ್ರಸ್ಟ್ನ ಅಧ್ಯಕ್ಷ ಕುಮಾರಯ್ಯ, ರಂಗನಾಥ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

