ಬೆಂಗಳೂರು ಗ್ರಾಮಾಂತರ

ರೈತಪರ ಸಂಘಟನೆಗಳು ವಿರಳ: ವಿಷಾದ

Published On :

ಕ.ಪ್ರ.ವಾರ್ತೆ   ನೆಲಮಂಗಲ   ಜು. 18
ರಾಜ್ಯದಲ್ಲಿ ಸಂಘಟನೆಗಳು ಸಾಕಷ್ಟಿವೆಯಾದರೂ ದೇಶದ ಬೆನ್ನೆಲುಬಾದ ರೈತಪರ ಹೋರಾಟ ನಡೆಸುವ ಸಂಘಟನೆಗಳ ಸಂಖ್ಯೆ ತೀರಾ ವಿರಳ ಇದೆ ಎಂದು ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಗುರುವಾರ ತಾಲೂಕಿನ ದಾಬಸ್ಪೇಟೆ ಬಳಿ ಇರುವ ವನಕಲ್ಲು ಮಲ್ಲೇಶ್ವರ ಮಠದಲ್ಲಿ ನಡೆದ ಭಾರತೀಯ ಕಿಸಾನ್ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರ ಹೆಸರಿನಲ್ಲಿ ಹುಟ್ಟಿಕೊಂಡಿರುವ ಸಂಘಗಳು ರಾಜಕೀಯ ಪ್ರೇರಿತವಾಗಿರಬಾರದು ರೈತರ ಸಮಸ್ಯೆ ಮಾತ್ರ ಬಿಂಬಿಸುವ ಉದ್ದೇಶ ಹೊಂದಿರಬೇಕು. ಆಗ ಮಾತ್ರ ರೈತರಿಗೆ ಸರ್ಕಾರದಿಂದ ಆಗುತ್ತಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಿಕೊಳ್ಳಲು ಸುಲಭವಾಗುತ್ತದೆ ಎಂದರು.
ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಸಾವಯವ ಕೃಷಿ ಪದ್ಧತಿಗೆ ಅನುಕೂಲ ಕಲ್ಪಿಸಬೇಕು. ರೈತರಿಗೆ ಸಾಕಷ್ಟು ವಿದ್ಯುತ್ ಪೂರೈಕೆ ಮಾಡಬೇಕು. ಅತೀ ಕಡಿಮೆ ಬಡ್ಡಿ ದರದಲ್ಲಿ ಸಾಲವಾಗಿ ಹಣ ನೀಡಬೇಕು. ಬೆಳೆದ ಬೆಳೆಗೆ ಮಾರುಕಟ್ಟೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ದೇಶದ 20 ರಾಜ್ಯಗಳಲ್ಲಿ ಕಿಸಾನ್ ಸಂಘ ಕಾರ್ಯ ನಿರ್ವಹಿಸುತ್ತಿದೆ. ಈ ಸಂಘಟನೆ ಮತ್ತಷ್ಟು ಬಲಿಷ್ಠವಾಗಬೇಕಾದರೆ ಪ್ರತಿ ಹಳ್ಳಿಯ ಮಟ್ಟದಲ್ಲೂ ಸ್ಥಾಪನೆಯಾಗಬೇಕು ಎಂದು ಹೇಳಿದರು.
ಸಂಘದ ಕಾರ್ಯದರ್ಶಿ ಗಂಗಾಧರ್ ಮಾತನಾಡಿ, ಇತರೆ ಸಂಘಟನೆಗಳಂತೆ ರೈತ ಸಂಘಟನೆಗಳು ಪ್ರಭಾವಶಾಲಿಯಾಗಬೇಕು. ರೈತರಿಗೆ ಸರ್ಕಾರದಿಂದ ಅನ್ಯಾಯ ಮತ್ತು ಸೌಲಭ್ಯ ನೀಡುವಲ್ಲಿ ತೊಂದರೆ ಮಾಡಿದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕು ಎಂದರು.
ಸಂಘದ ತಾಲೂಕು ಅಧ್ಯಕ್ಷ ಗಂಗಹನುಮಯ್ಯ ಮಾತನಾಡಿ, ಮುಂದಿನ ತಿಂಗಳ 23ಕ್ಕೆ ನವದೆಹಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಿಸಾನ್ ಸಮಾವೇಶಕ್ಕೆ 30 ಮಂದಿ ರೈತರು ಭಾಗವಹಿಸಲಿದ್ದೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.