ಬೆಂಗಳೂರು ಗ್ರಾಮಾಂತರ

ಆದಿಚುಂಚನಗಿರಿ ಮಠದ ಮೇಲೆ ಐಟಿ ದಾಳಿ: ಒಕ್ಕಲಿಗರ ಪ್ರತಿಭಟನೆ

Published On :

ಚನ್ನಪಟ್ಟಣ: ಆದಿಚುಂಚನಗಿರಿ ಮಠದ ಮೇಲೆ ನಡೆದಿರುವ ಐಟಿ ದಾಳಿಯನ್ನು ಖಂಡಿಸಿ ಜಿಲ್ಲಾ ಒಕ್ಕಲಿಗರ ವೇದಿಕೆ ನೇತೃತ್ವದಲ್ಲಿ ತಾಲೂಕಿನ ಒಕ್ಕಲಿಗರ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಒಕ್ಕಲಿಗರ ಮೇಲಿನ ದ್ವೇಷದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ದಾಳಿ ಮಾಡಿಸಿದ್ದು ದ್ವೇಷದ ರಾಜಕಾರಣ ನಡೆಸುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಆದಿಚುಂಚನಗಿರಿ ಸಂಸ್ಥಾನ ಒಕ್ಕಲಿಗರ ಸ್ವಾಭಿಮಾನದ ಕೇಂದ್ರವಾಗಿದ್ದು  ಶಿಕ್ಷಣ ಮತ್ತು ಧಾರ್ಮಿಕ ಕ್ಷೇತ್ರಕ್ಕೆ ಹಲವಾರು ವರ್ಷಗಳಿಂದ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದು ಈ ಮಠದ ಮೇಲೆ ಐಟಿ ದಾಳಿ ನಡೆಸುವ ಮೂಲಕ ಒಕ್ಕಲಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡರ ಭಾವಚಿತ್ರ ಮುಖ್ಯ ಮಂತ್ರಿ ಕಚೇರಿಯಿಂದ ತೆಗೆಸಿರುವುದು, ಒಕ್ಕಲಿಗ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವುದು ಸೇರಿ ದ್ವೇಷದ ರಾಜಕಾರಣ ನಡೆಸುತ್ತಿರುವ ಮುಖ್ಯಮಂತ್ರಿಗಳು ತಮ್ಮ ರಾಜಕಾರಣವನ್ನು ಮುಂದುವರೆಸಿದ್ದೇ ಆದಲ್ಲಿ ಒಕ್ಕಲಿಗರ ಶಕ್ತಿ ಏನೆಂದು ತೋರಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜೆಡಿಎಸ್ ಮುಖಂಡ ಸಿಂ.ಲಿಂ.ನಾಗರಾಜು, ಚಂದ್ರಕಾಂತ್,  ಆನಂದಸ್ವಾಮಿ, ತಾ.ಪಂ ಪ್ರಭಾರ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ಕಾಂತರಾಜು, ಚಿನ್ನಗಿರೀಗೌಡ, ಭಾನು ಪ್ರಕಾಶ್, ರಮೇಶ್, ಜಿಲ್ಲಾ ಒಕ್ಕಲಿಗ ವೇದಿಕೆ ಅಧ್ಯಕ್ಷ ರಮೇಶ್, ಒಕ್ಕಲಿಗ ಮುಖಂಡ ಎನ್.ಎಸ್. ಸುರೇಶ್ಗೌಡ, ಸತೀಶ್ಬಾಬು, ಮಾದೇಗೌಡ ಮುಂತಾದವರು ಪಾಲ್ಗೊಂಡಿದ್ದರು.
ರಸ್ತೆ ತಡೆಯಿಂದಾಗಿ ಕೆಲಕಾಲ ಬಸ್ ಸಂಚಾರ ಅಸ್ತವ್ಯಸ್ಥ ಗೊಂಡಿತ್ತು. ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರ ಮನ ಒಲಿಸಿ ಸಂಚಾರ ಮುಕ್ತ ಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.