ಬೆಂಗಳೂರು ಗ್ರಾಮಾಂತರ

ಆಯುಕ್ತ ಚಿದಾನಂದ, ಶೇಖರ 5 ದಿನ ಪೊಲೀಸ್ ಕಸ್ಟಡಿಗೆ

Published On :

ರಾಮನಗರ: ರಾ-ಚ ಪ್ರಾಧಿಕಾರದ ಬಹುಕೋಟಿ ಹಗರಣದಲ್ಲಿ ಬಂಧಿತರಾಗಿರುವ ಸಂಸ್ಥೆಯ ಆಯುಕ್ತ ಚಿದಾನಂದ ಮತ್ತು ವಂಚಕರ ಜಾಲದ ಸದಸ್ಯ ಶೇಖರನನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯವು ಶುಕ್ರವಾರ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.  ಗುರುವಾರವಷ್ಟೇ ಇಬ್ಬರೂ ಆರೋಪಿಗಳನ್ನು ದಸ್ತಗಿರಿ ಮಾಡಿದ್ದ ಹಗರಣದ ತನಿಖಾ ತಂಡವು ಶುಕ್ರವಾರ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನದವರೆಗೆ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಕೋರಿಕೆ ಸಲ್ಲಿಸಿತು.  ಪೊಲೀಸರ ಅರ್ಜಿ ಪರಿಶೀಲಿಸಿದ ನ್ಯಾಯಾಧೀಶ ಎಸ್.ಎಚ್.ಹೊಸಗೌಡರ, 1ನೇ ಆರೋಪಿ ಚಿದಾನಂದ ಅವರನ್ನು 8 ದಿನದವರೆಗೆ ಮತ್ತು ಮತ್ತೊಬ್ಬ ಆರೋಪಿ ಶೇಖರನನ್ನು 5 ದಿನದವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.