ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ನಲ್ಲಿ ಭಿನ್ನಮತ ಶುರು

Published On :

ಬೆಂಗಳೂರು: ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಭಿನ್ನಮತ ಚಟುವಟಿಕೆ ಆರಂಭಗೊಂಡಿದೆ.
ಈ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸಬೇಕು ಎಂದು ಪಕ್ಷದ ಮುಖಂಡರು ನಿರ್ಧರಿಸುವುದಕ್ಕೆ ಮುನ್ನವೇ ಆಕಾಂಕ್ಷಿಗಳಲ್ಲಿ ಪೈಪೋಟಿ ಆರಂಭವಾಗಿದೆ. ಮಂಡ್ಯದಿಂದ ಎಲ್.ಆರ್.ಶಿವರಾಮೇಗೌಡ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ತೇಜಸ್ವಿನಿ ಗೌಡ ಅಭ್ಯರ್ಥಿಯಾಗಲು ಸಿದ್ದರಾಗಿದ್ದಾರೆ.
ಆದರೆ ತೇಜಸ್ವಿನಿ ಅವರ ಉತ್ಸಾಹಕ್ಕೆ ತಣ್ಣೀರು ಎರಚುವ ಪ್ರಕ್ರಿಯೆ ಕಾಂಗ್ರೆಸ್ನಲ್ಲಿ ಆರಂಭಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ತೇಜಸ್ವಿನಿ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಒತ್ತಾಯಿಸಿ ಕನಕಪುರ, ಮಾಗಡಿ, ಚನ್ನಪಟ್ಟಣ, ಬೆಂಗಳೂರು ದಕ್ಷಿಣ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.
ತೇಜಸ್ವಿನಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಗಡಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧವಾಗಿ ಸಮಾಜದ್ರೋಹಿ ಶಕ್ತಿಗಳಿಗೆ ನೆರವು ನೀಡಿದ್ದಾರೆ. ಅಂಥವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ. ಕಳೆದ ಲೋಕಸಭಾ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ಅಂತರದಿಂದ ಸೋಲು ಅನುಭವಿಸಿರುವ ಅವರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಅವಕಾಶ ನೀಡಬಾರದು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.