ಚಾಮುಂಡೇಶ್ವರಿ ಕರಗ ಮಹೋತ್ಸಕ್ಕೆ ಸಿದ್ಧತೆ: ರಾಜು
ಕ.ಪ್ರ.ವಾರ್ತೆ ರಾಮನಗರ ಜು.21
ನಗರದ ಶಕ್ತಿ ದೇವತೆ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಕರಗ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ರಾಜು ತಿಳಿಸಿದರು.
ಜು.23ರಂದು ಸಂಗೀತ ರಸಸಂಜೆ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.
ಇದಕ್ಕಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ 60್ಗ80 ಅಡಿ ಅಗಲದ ಟೈಟಾನಿಕ್ ಹಡಗಿನ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು.
ಪ್ರಸಿದ್ಧ ಗಾಯಕ ರಾಜ್ಕಿರಣ್ ಸಾರಥ್ಯದಲ್ಲಿ ನಡೆಯುವ ರಸಸಂಜೆ ಕಾರ್ಯಕ್ರಮದಲ್ಲಿ ಹೇಮಂತ್, ಡಾ.ಶಮಿತಾ ಮಲ್ನಾಡ್, ಸುಪ್ರಿಯಾ ಹಾಡಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿರುವ ನೃತ್ಯ ಕಲಾವಿದೆ
ಬೇಬಿ ವರ್ಷಿಣಿ, ಚೇತನ್, ಎಸ್ಕೆ ಗ್ರೂಪ್ ಕಲಾವಿದರು, ಚೆನ್ನೈನ ಡೇವಿಡ್ ನೃತ್ಯ ಪ್ರದರ್ಶನ ಮಾಡುವರು. ಬಿಗ್ ಬಾಸ್ ಖ್ಯಾತಿಯ ಅನುಶ್ರೀ ಅವರು ಕಾರ್ಯಕ್ರಮದ ನಿರೂಪಣೆ ಮಾಡುವರು ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಜಮೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಅಪ್ಸರ್ ಆಗಾ, ಇ.ಕೃಷ್ಣಪ್ಪ, ಪುಟ್ಟಣ್ಣ ಭಾಗವಹಿಸುವರು ಎಂದು ಕೆ.ರಾಜು ಹೇಳಿದರು.
ಕರಗ ಮಹೋತ್ಸವದ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳ ಅಲಂಕಾರವನ್ನು ಸಮಿತಿಯಿಂದಲೇ ಏರ್ಪಡಿಸಲಾಗುವುದು. ನಾಗರಿಕರು ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ಧರ್ಮ ಭೇದ ಮರೆತು ಆಚರಿಸಬೇಕು ಎಂದು ಕರೆ ನೀಡಿದರು.
ಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ರಾಜಶೇಖರ್, ಜೆ.ಮುಕುಂದರಾಜ್, ಬಿ.ಉಮೇಶ್, ನಾಗರಾಜ್, ಎ.ಜೆ.ಸುರೇಶ್, ರಾ.ಸಿ.ದೇವರಾಜ್, ದೊರೆಸ್ವಾಮಿ, ಚಿಕ್ಕಶಂಕರಣ್ಣ, ಸೋಮಶೇಖರ್ ರಾವ್, ಶಿವಲಿಂಗೇಗೌಡ ರವಿ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

