ಬೆಂಗಳೂರು ಗ್ರಾಮಾಂತರ

ತಾ. ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ

Published On :

ಮಾಗಡಿ: ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಅರಸನಕುಂಟೆ ಸರ್ಕಾರಿ ಪ್ರೌಢ ಶಾಲೆಯ ಎ.ಎನ್. ಜಗದೀಶ್ ಆಯ್ಕೆಯಾಗಿದ್ದಾರೆ. ಹರ್ತಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಟಿ.ಎ. ವಾಸುದೇವ್ ಮತ್ತು ಲಕ್ಕೇನಹಳ್ಳಿ ಶಾಲೆಯ ವೆಂಕಟೇಶ್ ಇತರರು ಅಭಿನಂದಿಸಿದ್ದಾರೆ.

ರಾಮಕೃಷ್ಣಯ್ಯ ರಾಜಿನಾಮೆ  ಆಗ್ರಹ
ಮಾಗಡಿ:
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ರಾಮಕೃಷ್ಣಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಕೂಡಲೆ ರಾಜಿನಾಮ ನೀಡಬೇಕು, ಇಲ್ಲದಿದ್ದರೆ ತಾಲೂಕು ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಎಂ. ಕೆಂಪೇಗೌಡ ಅವರ ನೇತೃತ್ವದಲ್ಲಿ ರಾಮಕೃಷ್ಣಯ್ಯ ಅವರ ವಿರುದ್ಧ ಬೃಹತ್ ಧರಣಿ ನಡೆಸುವುದಾಗಿ ಸಂಘದ ಮಾಜಿ ಅಧ್ಯಕ್ಷ ಕೆ.ಎಚ್. ಲೋಕೇಶ್ ಹಾಗೂ ಇತರೆ ನಿರ್ದೇಶಕರುಗಳು ಎಚ್ಚರಿಸಿದ್ದಾರೆ. ಜಿಲ್ಲಾ ಶಾಖೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣಯ್ಯ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿದ್ದು, ಇಲ್ಲಿಯವರೆಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕೇವಲ ಸ್ವಾರ್ಥ ಕಾರ್ಯಗಳನ್ನು ನೆರವೇರಿಸಿಕೊಂಡು ಬರುತ್ತಿರುವ ರಾಮಕೃಷ್ಣಯ್ಯ ಅವರು ಇಲ್ಲಿಯವರೆಗೂ ಸರ್ವ ಸದಸ್ಯರ ಸಭೆ ಕರೆದಿಲ್ಲ. ಇತ್ತೀಚೆಗೆ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ, ಹೀನಾಯ ಸೋಲುಂಡಿದ್ದು, ಈ ಹಿನ್ನೆಲೆಯಲ್ಲಿ ಕೂಡಲೆ ರಾಮಕೃಷ್ಣಯ್ಯ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ಕೂಡಲೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅಭ್ಯರ್ಥಿ ಆಯ್ಕೆಗೆ ಇಂದು ಸಭೆ: ಎಚ್ಡಿಕೆ
ರಾಮನಗರ:
ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳ ಮರು ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಈವರೆಗೆ ಆಯ್ಕೆ ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಜು.25ಕ್ಕೆ ಸಭೆ ಕರೆಯಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರು ಗ್ರಾಮಾಂತರಕ್ಕೆ ಅನಿತಾ ಕುಮಾರಸ್ವಾಮಿ, ಮಂಡ್ಯಕ್ಕೆ ಸಿ.ಎಸ್.ಪುಟ್ಟರಾಜು ಅಭ್ಯರ್ಥಿ ಎನ್ನುವುದು ಊಹಾಪೋಹವಷ್ಟೇ. ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರ ಸಮ್ಮುಖದಲ್ಲೇ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.  

ನೀತಿ ಸಂಹಿತೆ: ಪ್ರಚಾರ ಸಾಮಗ್ರಿ ತೆರವು
ರಾಮನಗರ:
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮರು ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತವು ಬುಧವಾರದಿಂದ ಪ್ರಚಾರ ಸಾಮಗ್ರಿಗಳ ತೆರವು ಕಾರ್ಯಾಚರಣೆಗೆ ಇಳಿದಿದೆ. ಚಾಮುಂಡೇಶ್ವರಿ ಕರಗದ ಹಿನ್ನೆಲೆಯಲ್ಲಿ ರಾಮನಗರದಾದ್ಯಂತ ರಾಜಕೀಯ ಮುಖಂಡರ ಭಾವಚಿತ್ರವಿರುವ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು. ಪೂರ್ವ ನಿಗದಿತ ಉತ್ಸವದ ಆಚರಣೆಗೆಂದು ಒಂದು ದಿನದ ಮಟ್ಟಿಗಷ್ಟೇ ಜಿಲ್ಲಾಡಳಿತ ವಿನಾಯ್ತಿ ನೀಡಿತ್ತು. ಪ್ರಚಾರ ಸಾಮಗ್ರಿಗಳ ತೆರವು ಕಾರ್ಯವನ್ನು ಪ್ರಾರಂಭಿಸಲಾಯಿತು. ಮಧ್ಯಾಹ್ನದ ವೇಳೆಗೆ ನಗರದಾದ್ಯಂತ ಬಹುತೇಕ ಪ್ರಚಾರ ಸಾಮಗ್ರಿಗಳನ್ನು ತೆರವು ಮಾಡಲಾಗಿದೆ.  ಲೋಕಸಭೆ ಕ್ಷೇತ್ರದ ಮರು ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಗೆ ಒತ್ತು ನೀಡಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಪ್ರಚಾರ ಸಾಮಗ್ರಿಗಳನ್ನು ತ್ವರಿತವಾಗಿ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಅವರು ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.