ಬೆಂಗಳೂರು ಗ್ರಾಮಾಂತರ

ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಉದ್ಯಮಿ ತುಳಸಿ ಮುನಿರಾಜು

Published On :

ಕ.ಪ್ರ.ವಾರ್ತೆ, ಬೆಂಗಳೂರು, ಜು. 25-
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಉದ್ಯಮಿ ತುಳಸಿ ಮುನಿರಾಜು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಗುರುವಾರ ನಡೆದ ಬಿಜೆಪಿಯ ಹಿರಿಯ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ, ಮಾಜಿ ಸಚಿವ ಸಿ.ಟಿ.ರವಿ ಮೊದಲಾದವರು ಭಾಗವಹಿಸಿದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಜು 27ರಂದು ನಡೆಯುವ ಕೋರ್ ಕಮಿಟಿ ಸಭೆ ಬಳಿಕ ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ.
ಆರ್.ಅಶೋಕ ಹಾಗೂ ಮಾಜಿ ಸಚಿವ ಎಂ.ಶ್ರೀನಿವಾಸ್ ಸ್ಪರ್ಧಿಸಲು ಒಲವು ವ್ಯಕ್ತಪಡಿಸದೇ ಇರುವ ಹಿನ್ನೆಲೆಯಲ್ಲಿ ಹಾಗೂ ಹೊಸಮುಖಗಳಿಗೆ ಅವಕಾಶ ನೀಡಬೇಕೆಂಬ ಉದ್ದೇಶದಿಂದ ತುಳಸಿ ಮುನಿರಾಜು ಅವರನ್ನು ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಈ ಹಿಂದೆ ಬಿಬಿಎಂಪಿ ಅಂಜನಾಪುರ ವಾರ್ಡ್ನಿಂದ ಸ್ಪರ್ಧಿಸಿ ಸೋತಿದ್ದ ಮುನಿರಾಜು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಳೆದ ವಿಧಾನಸಭೆ ಚುನಾವಣೆ ಸ್ಪರ್ಧಿಸ ಬಯಸಿದ್ದರು. ಜತೆಗೆ ದೆಹಲಿ ನಾಯಕರ ಜತೆ ಉತ್ತಮ ಸಂಬಂಧ ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಶುಕ್ರವಾರ ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ತಿಳಿದು ಬಂದಿದೆ.

ಚುನಾವಣಾ ವೆಚ್ಚ ರು. 40 ಲಕ್ಷಕ್ಕೆ ನಿಗದಿ
ಈ ಮಧ್ಯೆ ಈ ಎರಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಜುಲೈ 27ರಂದು ಅಧಿಸೂಚನೆ ಹೊರಡಿಸಲು ನಿರ್ಧರಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಲೋಕಸಭಾ ಚುನಾವಣೆ ವೆಚ್ಚವನ್ನು ರು. 40 ಲಕ್ಷಕ್ಕೆ ನಿಗದಿಗೊಳಿಸಿದ್ದಾರೆ. ಆಗಸ್ಟ್ 3 ನಾಮಪತ್ರ ಸಲ್ಲಿಸುವುದಕ್ಕೆ ಕೊನೆಯ ದಿನವಾಗಿದ್ದು, ನಾಮಪತ್ರ ವಾಪಾಸ್ ತೆಗೆದುಕೊಳ್ಳಲು 7 ಕೊನೆ ದಿನ. 21ರಂದು ಮತದಾನ, ಆ.24ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.