ಕನಕಪುರ ಲಯನ್ಸ್ ಸಿಲ್ಕ್ ಸಿಟಿ ಕ್ಲಬ್ನ ಪದವಿ ಪ್ರದಾನ
ಕನಕಪುರ: ಲಯನ್ಸ್ ಸಿಲ್ಕ್ ಸಿಟಿ ಕ್ಲಬ್ನ ಪದವಿ ಪ್ರದಾನ ಸಮಾರಂಭ ಇಲ್ಲಿನ ಎಸ್ಬಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಎಂ.ಬಿ.ಸದಾಶಿವರವರು ನೂತನ ಅಧ್ಯಕ್ಷರಾದ ಮುನಿನಿಂಗಯ್ಯ ಹಾಗೂ ತಂಡದವರಿಗೆ ಪದವಿ ಪ್ರದಾನ ನೆರವೇರಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಯು.ಸಿ.ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಪಾಲಕ ಸದಾಶಿವ ಮಾತನಾಡುತ್ತಾ, ಕನಕಪುರ ಸಿಲ್ಕ್ಸಿಟಿ ಕ್ಲಬ್ಸಮುದಾಯದ ಏಳಿಗೆಗಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದೆ. ಸದ್ಯದಲ್ಲಿಯೇ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ತನ್ನ ಚಟುವಟಿಕೆಗಳನ್ನು ವಿಸ್ತರಿಸುವಲ್ಲಿ ಯಶಸ್ವಿಯಾಗಿರುವುದು ಸ್ವಾಗತಾರ್ಹ ಎಂದು ಹೇಳಿದರು. ಮಾಜಿ ರಾಜ್ಯಪಾಲರಾದ ಡಾ.ಕೆ.ಎನ್.ಮುನಿಯಪ್ಪ ಸೇವಾಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ತಾಲೂಕಿನಲ್ಲಿ ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಕನ್ನಡಮಾಧ್ಯಮದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ, ಶಾಲಾವಿದ್ಯಾರ್ಥಿಗಳಿಗೆ ಸಮವಸ್ತ್ರ ,ನೋಟ್ಪುಸ್ತಕ ವಿತರಣೆ, ಉಚಿತ ಕನ್ನಡಕಗಳ ವಿತರಣೆ, ವೀಲ್ಚೇರ್ಹಾಗೂ ಮಹಿಳೆಯರಿಗೆ ಹೊಲಿಗೆಯಂತ್ರಗಳ ವಿತರಣೆಯನ್ನು ನೆರವೇರಿಸಲಾಯಿತು. ಸತ್ಯಪ್ರಕಾಶ್ ಉಪಾಧ್ಯ, ಕೆ.ದೇವೇಗೌಡ, ಜಿ.ಪಿ.ದಿವಾಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

