ಬೆಂಗಳೂರು ಗ್ರಾಮಾಂತರ

ತಪ್ಪು ಮಾಡಿ ಕಾನೂನು ಗೊತ್ತಿಲ್ಲವೆಂದರೆ ಕ್ಷಮೆ ಇಲ್ಲ

Published On :

ದೇವನಹಳ್ಳಿ: ಕಾನೂನು ಗೊತ್ತಿಲ್ಲ ಎಂದು ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲಿ ಕ್ಷಮೆ ಇಲ್ಲ, ಶಿಕ್ಷೆ ಅನುಭವಿಸಲೇಬೇಕು ಎಂದು ಪ್ರಧಾನ ಸಿವಿಲ್ ನ್ಯಾ. ಜೈಬುನ್ನಿಸರವರು ಶುಕ್ರವಾರ ಗುರುಭವನದಲ್ಲಿ ನಡೆದ ಕಾನೂನು ಅರಿವು ಸಮಾರಂಭದಲ್ಲಿ ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಾಯಕ ಪ್ರಾದೇಶಿಕ ಅಧಿಕಾರಿಗಳ ಕಚೇರಿ, ಶಿಕ್ಷಣ ಇಲಾಖೆ ಹಾಗೂ ಪೋಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಸಮಾರಂಭವನ್ನು ಆಯೋಜಿಸಲಾಗಿತ್ತು.
ಸಮಾರಂಭವನ್ನು ಹಿರಿಯ ಸಿವಿಲ್ ನ್ಯಾ. ಎಸ್.ನಟರಾಜ್‌ರವರು ಉದ್ಘಾಟಿಸಿ ವಾಹನ ಚಲಾಯಿಸುವ ಪ್ರತಿಯೊಬ್ಬರೂ ಚಾಲನಾ ಪರವಾನಗಿ ಜತೆಗೆ ವಾಹನಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಇಟ್ಟಿರಬೇಕು ಎಂದರು.
ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಬಾಲಕೃಷ್ಣರವರು ಮೋಟಾರು ವಾಹನ ಕಾಯಿದೆ ಬಗ್ಗೆ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬಿಇಒ ಮುನಿರಾಜು ವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಆರ್.ಮಾರೇಗೌಡ, ಸಹಾಯಕ ಸರ್ಕಾರಿ ಅಭಿಯೋಜಕರಾದ ಗಣಪತಿ ಮಾತನಾಡಿದರು. ಅಪರ ಸಿವಿಲ್ ನ್ಯಾ. ಅನಿತ, ವಕೀಲರ ಸಂಘದ ಉಪಾಧ್ಯಕ್ಷ ಕೇಶವಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.