ಯೋಜನೆಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ
ವಿಜಯಪುರ: ಪ್ರತಿಯೊಂದು ಅಂಗನವಾಡಿ ಕೇಂದ್ರಗಳಿಗೆ ಸರ್ಕಾರದಿಂದ ಬರುವ ಪೌಷ್ಟಿಕ ಆಹಾರ, ಭಾಗ್ಯಲಕ್ಷ್ಮಿ ಯೋಜನೆ ಬಗ್ಗೆ ತಿಳಿದುಕೊಂಡು ಅದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪುರಸಭಾ ಸದಸ್ಯ ಬಲಮುರಿ ಶ್ರೀನಿವಾಸ್ ತಿಳಿಸಿದರು. ಅವರು ಪಟ್ಟಣದ 18ನೇ ವಾರ್ಡಿನ ಶಾಂತಿ ನಗರ ಅಂಗನವಾಡಿ ಕೇಂದ್ರದಲ್ಲಿ ವೇದಾಂತ ಫೌಂಡೇಷನ್ ವತಿಯಿಂದ ಸಮವಸ್ತ್ರ ಹಾಗೂ ವಿಟಮಿನ್ಸ್ ಸಿರಪ್ ಅನ್ನು ಮಕ್ಕಳಿಗೆ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರದ ಐಸಿಡಿಎಸ್ ಯೋಜನೆಗಳ ಮತ್ತು ಈ ಯೋಜನೆಯಲ್ಲಿ ಬಾಲವಿಕಾಸ ಸಮಿತಿಯ ಪಾತ್ರ ಜವಾಬ್ದಾರಿಯ ಬಗ್ಗೆ ಸಾರ್ವಜನಿಕರಿಗೆ ವಿವರಿಸಿದರು. ಇದೇ ಸಂಧರ್ಭದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯ, ಸ್ಥಳೀಯ ಭೈಯಣ್ಣ, ಆರೋಗ್ಯ ಮಹಿಳಾ ಸಹಾಯಕಿ ಶಾರದಮ್ಮ ಮತ್ತು ಅಂಗನವಾಡಿಯ ಶಿಕ್ಷಕಿ ಸಿ.ರೂಪ, ಪೋಷಕು ಮತ್ತಿತರರು ಉಪಸ್ಥಿತರಿದ್ದರು.
ಉಗುಳು, ಮೂತ್ರ ವಿಸರ್ಜನೆ ಮಸೂದೆಗೆ ವಾಟಾಳ್ ಆಕ್ರೋಶ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹಾಗೂ ಮೂತ್ರ ವಿಸರ್ಜಿಸಿದರೆ ಜೈಲು ಶಿಕ್ಷೆ ವಿಧಿಸುವ ಮಸೂದೆ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದವರಿಗೆ ಶಿಕ್ಷೆ ವಿಧಿಸುವ ರಾಜ್ಯ ಸರ್ಕಾರದ ಪೌರ ನಿಗಮಗಳ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಮಂಡಿಸಿರುವುದೇ ದೊಡ್ಡ ತಪ್ಪು. ಇದಕ್ಕೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಒಪ್ಪಿಗೆ ಸೂಚಿಸಬಾರದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

