ಬೆಂಗಳೂರು ಗ್ರಾಮಾಂತರ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಮನೋಹರ್

Published On :

ಆನೇಕಲ್: ಗುಣಮಟ್ಟದ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಶಿಕ್ಷಕರ ಶ್ರಮ ಹಾಗೂ ಮಾರ್ಗದರ್ಶನದಿಂದ ಉತ್ತಮ ಫಲಿತಾಂಶ ಲಭಿಸುವುದು ಎಂದು ಚಲನಚಿತ್ರ ನಿರ್ಮಾಪಕ ಸಿ.ಆರ್. ಮನೋಹರ್ ನುಡಿದರು.
ಅವರು ಸರ್ಜಾಪುರದ ಸರ್ದಾರ್ ವಲ್ಲಭಭಾಯಿ ಪಟೇಲ್ ಶಾಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ರಚನಾತ್ಮಕ ಆಲೋಚನೆ ಹೊಂದಿ ಗುರಿಯ ಸಾಧನೆಗೆ ಮಾರ್ಗ ಕಂಡುಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಏಕಾಗ್ರತೆ ಹಾಗೂ ಶ್ರದ್ಧೆಯಿಂದ ಅಧ್ಯಯನ ಮಾಡಿ ಗುರಿ ತಲುಪಬೇಕು. ತಂದೆ-ತಾಯಿಯರಿಗೆ ಒಳ್ಳೆಯ ಹೆಸರು ತರಬೇಕೆಂದರು.
ವಿದ್ಯಾ ಸಂಸ್ಥೆಯ ಅಧ್ಯಕ್ಷ ರಾಮಸ್ವಾಮಿ ರೆಡ್ಡಿ ಮಾತನಾಡಿದರು.
ಸಮಾಜ ಸೇವಕರಾದ ಡಾ. ರವಿಚಂದ್ರ ರೆಡ್ಡಿ ಮತ್ತು ನಿರ್ಮಾಪಕ ಸಿ ಆರ್. ಮನೋಹರ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ನಾಗರಾಜ ರೆಡ್ಡಿ, ಗ್ರಾ. ಪಂ. ಸದಸ್ಯ ನಾರಾಯಣಸ್ವಾಮಿ, ಶಾಲೆಯ ನಿರ್ದೇಶಕ ಗೋಪಾಲ ಸ್ವಾಮಿ ಮತ್ತು ಮುಖ್ಯ ಶಿಕ್ಷಕ ಬಾಲರಾಜು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.