ಬೆಂಗಳೂರು ಗ್ರಾಮಾಂತರ

'ಸರ್ಕಾರಿ ಶಾಲೆಯಲ್ಲಿ ಪ್ರಯೋಗಾಲಯ ಕಡ್ಡಾಯ'

Published On :

ಕ.ಪ್ರ.ವಾರ್ತೆ ,  ಹೊಸಕೋಟೆ ,  ಜು.30
ಇಲ್ಲಿನ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಇನ್‌ಸ್ಪೈರ್ ಅವಾರ್ಡ್ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ  ಪಂಚಾಯ್ತಿ ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ ಚಾಲನೆ ನೀಡಿದರು.
ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮವನ್ನು ವೀಕ್ಷಿಸಿದ ಅಧ್ಯಕ್ಷರು ಮಕ್ಕಳ ಪ್ರಯೋಗಾಲಯಗಳ ಬಗ್ಗೆ  ಮಾತನಾಡಿ, ತಾಲೂಕಿನಲ್ಲಿ ಈ ಕಾರ್ಯಕ್ರಮ ಸತತ 3 ವರ್ಷಗಳಿಂದ ನಡೆಯುತ್ತಿದೆ. ಮಕ್ಕಳು ವೈಜ್ಞಾನಿಕ ದೃಷ್ಟಿಕೋನ ಹಾಗೂ ವಿಜ್ಞಾನ ಬಗ್ಗೆ ಹೆಚ್ಚು ಮಹತ್ವ ನೀಡಬೇಕೆಂಬುದು ಈ ಯೋಜನೆ ಉದ್ದೇಶ ಎಂದರು.
ಮುಂದಿನ ವಿದ್ಯಾಭ್ಯಾಸದ ದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ವ್ಯವಸ್ಥೆ ನೀಡಿ ಮಕ್ಕಳಿಗೆ ತಿಳಿಪಡಿಸಬೇಕು. ಆಗ ಸರ್ಕಾರ ನೀಡಿದ ಸಂಬಳ ಸಾರ್ಥಕವಾಗುತ್ತದೆ. ಸರ್ಕಾರ ಪ್ರತಿ ಮಗುವಿಗೂ ಪ್ರಯೋಗಾಲಯಗಳನ್ನು ಸಿದ್ಧಪಡಿಸಲು 5000 ನೀಡುತ್ತದೆ. ಈ ಭಾಗದಲ್ಲಿ ಆಯ್ಕೆಯಾದವರನ್ನು ರಾಷ್ಟ್ರಮಟ್ಟಕ್ಕೂ ಕಳಿಸುತ್ತಾರೆ.  ಆದ್ದರಿಂದ ಮಕ್ಕಳು ವಿಜ್ಞಾನದ ಕಡೆ ಹೆಚ್ಚು ಗಮನ ಹರಿಸಬೇಕು. ವಿಜ್ಞಾನಿಗಳಾಗಿ ದೇಶಕ್ಕೆ ಕೀರ್ತಿ ತರಬೇಕು ಎಂದರು.
ಪಟ್ಟಣದ ಸಿಟಿಜನ್ ಶಾಲೆ ವಿದ್ಯಾರ್ಥಿ ಯಶವಂತ್ ಎಂ. ಹೆಸರಿನ ಹತ್ತನೇ ತರಗತಿ ವಿದ್ಯಾರ್ಥಿ ಅಮೆರಿಕಾದಲ್ಲಿ ವಿಜ್ಞಾನದ ಸಂಶೋಧನೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ ಎಂಬುದನ್ನು ಉದಾಹರಣೆ ನೀಡಿದ ಅವರು, ಈ ಸಾಧನೆ ಮಾದರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳು ಸಾಧನೆಗೆ ಮುಂದಾಗಬೇಕು ಎಂದರು.
ಪ್ರಭಾರೆ ಶಿಕ್ಷಣ ಉಪನಿರ್ದೆಶಕ ಮಾದೇಗೌಡರು, ದೇವನಹಳ್ಳಿ ಶಿಕ್ಷಣಾಧಿಕಾರಿ ಮುನಿರಾಜು, ಎಸ್‌ಡಿಎಂಸಿ  ಉಪಾಧ್ಯಕ್ಷ ಕೃಷ್ಣಪ್ಪ, ಶಾಲೆ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.