ಬೈಕ್ನಿಂದ ಬಿದ್ದು ಯುವಕ ಸಾವು
ಮಾಗಡಿ: ಯುವಕನೊರ್ವ ಬೈಕ್ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಹುಲೀಕಲ್ನಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ. ತುಮಕೂರಿನ ಬನಶಂಕರಿ ನಿವಾಸಿ ಗುತ್ತಿಗೆದಾರ ಪ್ರಸನ್ನ (28) ಮೃತಪಟ್ಟ ದುರ್ದೈವಿ ಎಂದು ಪೊಲೀಸರು ಗುರುತಿಸಿದ್ದಾರೆ. ಮಾಗಡಿ ತಾಲೂಕಿನ ಕುದೂರು ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವಲ್ಲಿ ಭಾಗವಹಿಸಿ ಮಧ್ಯಾಹ್ನ ಊಟ ಮುಗಿಸಿಕೊಂಡು ತುಮಕೂರಿಗೆ ಬೈಕ್ನಲ್ಲಿ ಪ್ರಸನ್ನ ಮತ್ತು ನಾಗರಾಜು ತೆರಳುತ್ತಿದ್ದಾಗ ಹುಲೀಕಲ್ ಬಳಿ ಬೀದಿ ನಾಯಿಯೊಂದು ರಸ್ತೆಯಲ್ಲಿ ಅಡ್ಡ ಬಂದ ಪರಿಣಾಮ ಬೈಕ್ ನಾಯಿ ಮೇಲೆ ಹರಿದು ಸವಾರರು ರಸ್ತೆಯಲ್ಲಿ ಉರುಳಿಬಿದ್ದಿದ್ದಾರೆ. ತೀವ್ರವಾಗಿ ತಲೆಗೆ ಪೆಟ್ಟು ಬಿದ್ದ ರಕ್ತ ಸ್ರಾವದಿಂದ ಗಾಯಗೊಂಡ ಗಾಯಳುಗಳನ್ನು ಪೊಲೀಸ್ ಅಂಬ್ಯುಲೆನ್ಸ್ ಮೂಲಕ ಮಾಗಡಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ವೈದ್ಯರು ಗಾಯಾಳು ಪ್ರಸನ್ನ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮೃತಪಟ್ಟಿದ್ದಾನೆ. ಮತ್ತೊಬ್ಬ ಗಾಯಾಳು ನಾಗರಾಜು ಅವರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುದೂರು ಪೊಲೀಸರು ತಿಳಿಸಿದ್ದಾರೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಡೆಂಘೀ ಜ್ವರಕ್ಕೆ ವಡ್ಡರದೊಡ್ಡಿಯ ಬಾಲಕ ಬಲಿ
ರಾಮನಗರ: ಶಂಕಿತ ಡೆಂಘೀ ಜ್ವರಕ್ಕೆ ತಾಲೂಕಿನ ವಡ್ಡರದೊಡ್ಡಿಯ ರಘು (15) ಬಲಿಯಾಗಿದ್ದಾನೆ. ಬಾಲಕನ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಪೋಷಕರು ಆಸ್ಪತ್ರೆ ವೈದ್ಯರ ಜತೆ ವಾಗ್ವಾದ ನಡೆಸಿರುವ ಘಟನೆ ನಡೆದಿದೆ. ಮೃತ ಬಾಲಕ ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಜ್ವರದ ಜತೆಗೆ ವಾಂತಿ ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಚಿಕಿತ್ಸೆಗೆ ಕರೆತಂದಿದ್ದರು. ತೀವ್ರ ನಿತ್ರಾಣಗೊಂಡಿದ್ದ ಬಾಲಕನಿಗೆ ತುರ್ತು ಚಿಕಿತ್ಸೆ ವಾರ್ಡಿನಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಪರೀಕ್ಷೆಗಾಗಿ ರಕ್ತದ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ, ರಕ್ತ ಪರೀಕ್ಷೆ ವರದಿ ಬರುವ ಮುನ್ನವೇ ಬಾಲಕ ಮತ್ತು ಪೋಷಕರು ನಾಪತ್ತೆಯಾಗಿದ್ದರು. ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬಾಲಕ ಮೃತಪಟ್ಟಿದ್ದಾನೆ. ಆಕ್ರೋಶಗೊಂಡ ಪೋಷಕರು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

