ಬೆಂಗಳೂರು ಗ್ರಾಮಾಂತರ

ಕೈ' ಸಂಘಟನೆಗೆ ಡಿಕೆಶಿ ಆದೇಶ: ರಘುನಂದನ್

Published On :

ಚನ್ನಪಟ್ಟಣ: ತಾಲೂಕು ಕಾಂಗ್ರೆಸ್ ಪಕ್ಷವನ್ನು ಸದೃಢ ಗೊಳಿಸುವಂತೆ ಡಿ.ಕೆ.ಶಿವಕುಮಾರ್ ತಮಗೆ ಆದೇಶ ನೀಡಿದ್ದು ಅದರಂತೆ ನಾನು ತಾಲೂಕಿನ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಗೆಲವಿಗೆ ಶ್ರಮಿಸುತ್ತೇನೆ ಎಂದು ರಘುನಂದನ್ ರಾಮಣ್ಣ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರಲ್ಲಿ ಹಮ್ಮಿಕೊಳ್ಳಲಾಗಿದ್ದ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿ, ಡಿ.ಕೆ.ಶಿವಕುಮಾರ್ ಮಂತ್ರಿಯಾಗಿದ್ದರೆ ನಮಗೆ ಅನುಕೂಲವಾಗುತ್ತಿತ್ತು ಅವರಿಗೆ ಅಧಿಕಾರ ಸಿಗದಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಾಕಷ್ಟು ನೋವಾಗಿದೆ ಎಂದರು.
ಮಂತ್ರಿ ಪದವಿ ದೊರೆಯುತ್ತೆ: ಡಿ.ಕೆ.ಶಿವಕುಮಾರ್ ಮೇಲೆ ಇರುವ ಆಪಾದನೆಗೆ ಸಂಬಂಧಿಸಿದಂತೆ ಕಾನೂನು ಸಚಿವಾಲಯ ಪರಿಶೀಲನೆ ನಡೆಸಿದ್ದು ಇವರ ಮೇಲಿನ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ ಎಂಬುದು ಸಾಬೀತಾಗಿದ್ದು ಸದ್ಯದಲ್ಲೇ ಅವರಿಗೆ ಸಚಿವ ಸ್ಥಾನ ದೊರಕಲಿದೆ ಎಂದರು.ನಿಮ್ಮ ಜತೆ ನಾನಿರುವೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದ್ದು ನಾನು ನಿಮ್ಮೊಂದಿಗೆ ಇದ್ದು ಪಕ್ಷ ಸಂಘಟಿಸುವೆ ಎಂದರು.
ನನಗೆ ಯಾವುದೇ ಅಧಿಕಾರ ಬೇಕಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ  ಸಂಘಟನೆಗೆ ದುಡಿಯುವುದಾಗಿ ತಿಳಿಸಿದ ಅವರು ಮುಂದಿನ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವುದು ನಮ್ಮೆಲ್ಲರ ಗುರಿ ಎಂದು ತಿಳಿಸಿದರು.
ಎ.ಸಿ. ವೀರೇಗೌಡ, ಶಿವಮಾದು, ಸತೀಶ್, ಪಿ.ಡಿ.ರಾಜು,  ಪ್ರಸನ್ನ, ಕೃಷ್ಣಾಪುರ ಕೆಂಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.